
ಇಸ್ತಾನ್‍ಬುಲ್, ಜು.9- ರೈಲು ಹಳಿ ತಪ್ಪಿ 24 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಟರ್ಕಿಯಲ್ಲಿ ನಡೆದಿದೆ. ನಿನ್ನೆ ಸಂಜೆ ಟೆಕಿರ್ ಡ್ಯಾಗ್ ಪ್ರಾಂತ್ಯದಿಂದ ಇಸ್ತಾನ್‍ಬುಲ್‍ಗೆ ತೆರಳುತ್ತಿದ್ದ ರೈಲು ಹಳಿ ತಪ್ಪಿದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತ ನಡೆದ ಸಂದರ್ಭದಲ್ಲಿ 10 ಮಂದಿ ಪ್ರಯಾಣಿಕರು ಮೃತಪಟ್ಟಿದ್ದರು. ಘಟನಾ ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಾಗ 14 ಮಂದಿ ಮೃತಪಟ್ಟಿದ್ದಾರೆ ಎಂದು ಟರ್ಕಿ ಉಪ ಪ್ರಧಾನಿ ರೆಸಿಫ್ ಆಕ್‍ಡ್ಯಾಗ್ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಪರಿಹಾರ ಕಾರ್ಯ ಪೂರ್ಣಗೊಂಡಿದ್ದು , ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.