ಪೂರ್ಣಗೊಂಡಿರುವ ಎಲೆ ಮಲ್ಲಪ್ಪ ಏತ ನೀರಾವರಿ ಯೋಜನೆ

 

ಬೆಂಗಳೂರು, ಜು.9-ಎಲೆ ಮಲ್ಲಪ್ಪ ಶೆಟ್ಟಿ ಕೆರೆಯಿಂದ ಏತನೀರಾವರಿ ಮೂಲಕ ಹೊಸಕೋಟೆ ದೊಡ್ಡ ಕೆರೆಗೆ ನೀರು ತುಂಬಿಸುವ ಯೋಜನೆ ಪೂರ್ಣಗೊಂಡಿದ್ದು, ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ವಿಧಾನಪರಿಷತ್‍ನಲ್ಲಿ ತಿಳಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಈ ಕೆರೆ ನೀರನ್ನು ಏತನೀರಾವರಿ ಯೋಜನೆ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ದಕ್ಷಿಣ ಪಿನಾಕಿನಿ ನದಿಗೆ ಹರಿಸುವ ಯಾವುದೇ ಯೋಜನೆ ಇರುವುದಿಲ್ಲ. ಆದರೆ ಹೊಸಕೋಟೆ ದೊಡ್ಡ ಕೆರೆಗೆ 293 ಲಕ್ಷ ರೂ. ವೆಚ್ಚದಲ್ಲಿ ನೀರು ಹರಿಸುವ ಯೋಜನೆ ಪೂರ್ಣಗೊಂಡು ಕಾರ್ಯನಿರ್ವಹಿಸುತ್ತಿದೆ ಎಂದರು.
ಇದರಿಂದ ಅಂತರ್ಜಲ ವೃದ್ಧಿಗೊಂಡು ಈ ಭಾಗದಲ್ಲಿರುವ ಬೋರ್‍ವೆಲ್‍ಗಳಲ್ಲಿ ಕುಡಿಯುವ ನೀರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ