ಚಾಮರಾಜನಗರ ಮೆಡಿಕಲ್ ಕಾಲೇಜಿಗೆ 450 ಹಾಸಿಗೆಗಳ ಆಸ್ಪತ್ರೆ

 

ಬೆಂಗಳೂರು, ಜು.9-ಚಾಮರಾಜನಗರ ವೈದ್ಯಕೀಯ ಕಾಲೇಜಿಗೆ ಅಗತ್ಯವಿರುವ 450 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ವಿಧಾನಪರಿಷತ್‍ನಲ್ಲಿ ಹೇಳಿದರು.
ಪ್ರಶ್ನೋತ್ತರ ಕಲಾಪದಲ್ಲಿ ಸಂದೇಶ್ ನಾಗರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಅಗತ್ಯವಾಗಿ ಬೇಕಾಗಿರುವ ಆಸ್ಪತ್ರೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಪ್ರಸ್ತುತ ಬೋಧನಾ ಆಸ್ಪತ್ರೆಯಲ್ಲಿರುವ ವಾರ್ಡ್‍ಗಳ ಸಂಖ್ಯೆ 22, ಸ್ತ್ರೀಯರಿಗೆ ಲಭ್ಯವಿರುವ ಹಾಸಿಗೆಗಳು 116, ಪುರುಷರಿಗೆ-101, ಮಕ್ಕಳಿಗೆ-40, ಬಾಣಂತಿಯರಿಗೆ-25, ಮನೋರೋಗ ವಿಭಾಗಕ್ಕೆ 8 ಈ ರೀತಿ ವಿಂಗಡಿಸಲಾಗಿದೆ ಎಂದರು.
450 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಹಾಲಿ ಇರುವ ಸಮಸ್ಯೆಗಳು ಬಗೆಹರಿಯಲಿವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ