ಏಳು ಸಾವಿರ ಅರಣ್ಯ ಅಗ್ನಿಗಾಹುತಿ

 

ಬೆಂಗಳೂರು, ಜು.9-ಕಳೆದ 2017ರಲ್ಲಿ ರಾಜ್ಯದಲ್ಲಿ 925 ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಪ್ರಕರಣಗಳು ಸಂಭವಿಸಿದ್ದು, 6,976.85 ಹೆಕ್ಟೇರ್ ಅರಣ್ಯ ಪ್ರದೇಶ ಹಾನಿಗೀಡಾಗಿದೆ ಎಂದು ಅರಣ್ಯ ಸಚಿವ ಆರ್.ಶಂಕರ್ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವೊಂದು ಮರಗಳು ಸುಟ್ಟಿದ್ದು, ವನ್ಯಪ್ರಾಣಿಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಆದರೆ ಸಣ್ಣ ಪ್ರಾಣಿ, ಪಕ್ಷಿಗಳು, ಉರಗ ಸಂತತಿಗಳಿಗೆ ಹಾನಿಯಾಗಿರುವ ಸಾಧ್ಯತೆಗಳಿದೆ. ಬಂಡೀಪುರ ಹುಲಿ ಸಂರಕ್ಷಿತ ಕಲ್ಕೆರೆ ಅರಣ್ಯ ಪ್ರದೇಶದಲ್ಲಿ ಮುರುಗೆಪ್ಪ ತಮ್ಮಣ್ಣ ಗೋಳ ಅರಣ್ಯ ರಕ್ಷಕ ಬೆಂಕಿ ಅವಘಡಕ್ಕೆ ಸಿಲುಕಿ ಹುತಾತ್ಮರಾಗಿದ್ದಾರೆ. ವಲಯ ಅರಣ್ಯಾಧಿಕಾರಿ ಗಂಗಾಧರ ಬೆಂಕಿ ವಾಚರ್‍ಗಳಾದ ಮಧು ಮತ್ತು ಮಂಜು ಎಂಬ ಸಿಬ್ಬಂದಿ ಗಾಯಗೊಂಡಿದ್ದು, ಚಿಕಿತ್ಸೆ ಮೂಲಕ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸಲು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಅರಣ್ಯ ಇಲಾಖೆ ಕೈಗೊಂಡಿದೆ. ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚುವಂತಹ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿ ಪೆÇಲೀಸ್ ಠಾಣೆಯಲ್ಲಿ ಮೊಕದ್ದಮೆ ಹೂಡಲಾಗುವುದು. ಕಳೆದ ಮೂರು ವರ್ಷಗಳಲ್ಲಿ ವನ್ಯ ಪ್ರಾಣಿಗಳ ಹಾವಳಿಯಿಂದ ಉಂಟಾದ ಬೆಳೆ ಹಾನಿ ಪ್ರಕರಣಗಳಲ್ಲಿ ರಾಜ್ಯದಲ್ಲಿ ಒಟ್ಟು 13.70 ಕೋಟಿ ರೂ. ಹಣವನ್ನು ನೀಡಲಾಗಿದೆ ಎಂದು ಹೇಳಿದರು.
ವನ್ಯಜೀವಿಗಳ ರಕ್ಷಣೆಗಾಗಿ ವೈಜ್ಞಾನಿಕ ತಂತ್ರಜ್ಞಾನವನ್ನು ಕೂಡ ಅಳವಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ