ಕಬಿನಿ ಜಲಾಶಯ ಭರ್ತಿ

ಮೈಸೂರು,ಜು.9-ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯದಿಂದ ನೀರನ್ನು ಹೊರ ಬಿಡಲಾಗುತ್ತಿದೆ. ಕಬಿನಿ ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಟ್ಟಿರುವ ಹಿನ್ನೆಲೆಯಲ್ಲಿ ಕಪಿಲನದಿ ತುಂಬಿ ಹರಿಯುತ್ತಿದೆ. ಕಪಿಲ ನದಿಯಲ್ಲಿ ನೀರು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿರುವ ನಂಜುಂಡೇಶ್ವರ ದೇವಾಲಯದ ಬಳಿ ಇರುವ 16 ಕಲ್ಲಿನ ಮಂಟಪ, ಮುಡಿಕಟ್ಟೆ, ಸ್ನಾನದ ಕಟ್ಟೆ ನೀರಿನಲ್ಲಿ ಮುಳುಗಡೆಗೊಂಡಿದೆ. ಕಪಿಲ ನದಿಯಲ್ಲಿ ಒಳ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸಲು ಭಕ್ತಾಧಿಗಳು, ಪ್ರವಾಸಿಗರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಬಿನಿ ಜಲಾಶಯದ ಇಂದಿನ ಮಟ್ಟ 2282.32 ಅಡಿ, ಒಳಹರಿವು 32.635ಕ್ಕೂ ಕ್ಯೂಸೆಕ್ಸ್, ಹೊರ ಹರಿವು 35 ಸಾವಿರ ಕ್ಯೂಸೆಕ್. ಕಳೆದ ವರ್ಷ ಇದೇ ಅವಧಿಯಲ್ಲಿ ಕಬಿನಿ ಜಲಾಶಯದಲ್ಲಿ 2263.60 ಅಡಿಗಳಷ್ಟು ನೀರು ತುಂಬಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ