ದಾವಣಗೆರೆ, ಜು.9- ಭದ್ರಾ ಜಲನಯನ ಪ್ರದೇಶದಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ನೀರಿನ ಒಳಹರಿವು ಹೆಚ್ಚಾಗಿರುವುದರಿಂದ 19,715ಕ್ಯೂಸೆಕ್ಗೆ ಏರಿಕೆಯಾಗಿದೆ. ಜಲಾಶಯಕ್ಕೆ ಒಂದೇ ದಿನದಲ್ಲಿ 2 ಅಡಿ ನೀರು ಹರಿದುಬಂದಿದ್ದು, ನೀರಿನ ಮಟ್ಟ 152 ಅಡಿಗೆ ದಾಟಿದೆ. ಕಳೆದ ವರ್ಷ ಈ ಸಮಯದಲ್ಲಿ 124 ಅಡಿ, 9 ಇಂಚು ಮಾತ್ರ ಇತ್ತು. ಇದೀಗ ಜಲಾಶಯದಲ್ಲಿ 36 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 19 ಟಿಎಂಸಿ ನೀರು ಹೆಚ್ಚು ಸಂಗ್ರಹವಾಗಿದೆ.
ಜಲಾಶಯ ಭರ್ತಿಯಾಗಲು 34 ಅಡಿ ಬಾಕಿ ಇದ್ದು, ಮಳೆ ಹೀಗೇ ಮುಂದುವರಿದರೆ ಜುಲೈ ಅಂತ್ಯಕ್ಕೆ ಜಲಾಶಯ ಭರ್ತಿಯಾಗಲಿದೆ ಎಂದು ಹಾಲಿವಾಣದ ಕಡಲಕಟ್ಟೆ ರೈತ ರಾಮಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.