ಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ದಾವಣಗೆರೆ, ಜು.9- ಭದ್ರಾ ಜಲನಯನ ಪ್ರದೇಶದಲ್ಲಿ ಮುಂಗಾರು ಮಳೆ ಸುರಿಯುತ್ತಿದ್ದು, ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ನೀರಿನ ಒಳಹರಿವು ಹೆಚ್ಚಾಗಿರುವುದರಿಂದ 19,715ಕ್ಯೂಸೆಕ್‍ಗೆ ಏರಿಕೆಯಾಗಿದೆ. ಜಲಾಶಯಕ್ಕೆ ಒಂದೇ ದಿನದಲ್ಲಿ 2 ಅಡಿ ನೀರು ಹರಿದುಬಂದಿದ್ದು, ನೀರಿನ ಮಟ್ಟ 152 ಅಡಿಗೆ ದಾಟಿದೆ. ಕಳೆದ ವರ್ಷ ಈ ಸಮಯದಲ್ಲಿ 124 ಅಡಿ, 9 ಇಂಚು ಮಾತ್ರ ಇತ್ತು. ಇದೀಗ ಜಲಾಶಯದಲ್ಲಿ 36 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 19 ಟಿಎಂಸಿ ನೀರು ಹೆಚ್ಚು ಸಂಗ್ರಹವಾಗಿದೆ.
ಜಲಾಶಯ ಭರ್ತಿಯಾಗಲು 34 ಅಡಿ ಬಾಕಿ ಇದ್ದು, ಮಳೆ ಹೀಗೇ ಮುಂದುವರಿದರೆ ಜುಲೈ ಅಂತ್ಯಕ್ಕೆ ಜಲಾಶಯ ಭರ್ತಿಯಾಗಲಿದೆ ಎಂದು ಹಾಲಿವಾಣದ ಕಡಲಕಟ್ಟೆ ರೈತ ರಾಮಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ