ಕಬಿನಿ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ

ಮೈಸೂರು, ಜು.9- ಕಬಿನಿ ಹಿನ್ನೀರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು ಬೆಳಗ್ಗೆ ಕಾಣಿಸಿಕೊಂಡಿದೆ. ಸುಮಾರು 45 ವರ್ಷದ ವ್ಯಕ್ತಿಯಾಗಿದ್ದು, ಕೇರಳ ಮೂಲದವರು ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಮೃತ ದೇಹವು ನೀರಿನಲ್ಲಿ ತೇಲುತ್ತಿರುವುದನ್ನು ಕಂಡ ಸಾರ್ವಜನಿಕರು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೆÇಲೀಸರು ಮೃತ ದೇಹವನ್ನು ನೀರಿನಿಂದ ಹೊರತೆಗೆದು ಎಚ್‍ಡಿ ಕೋಟೆಯ ಸಾರ್ವಜನಿಕ ಆಸ್ಪತ್ರೆಗೆ ಪರೀಕ್ಷೆಗಾಗಿ ರವಾನಿಸಿದ್ದಾರೆ. ಈ ಬಗ್ಗೆ ಬೀಚನಹಳ್ಳಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ