ಶ್ರೀನಗರ; ಜಮ್ಮು ಮತ್ತು ಕಾಶ್ಮೀರ ಶೋಪಿಯಾನ್ ಜಿಲ್ಲೆಯಲ್ಲಿ ಸೇನಾಪಡೆ ಉಗ್ರರ ವಿರುದ್ಧ ಎನ್’ಕೌಂಟರ್ ನಡೆಸುತ್ತಿದ್ದು, ಉಗ್ರರು-ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹಾಗೂ ಮೂವರು ನಾಗರಿಕರು ಗಾಯಗೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಶೋಪಿಯಾನ್ ಜಿಲ್ಲೆಯ ಗ್ರಾಮವೊಂದರಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಸೇನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.
ಎಂದಿನಂತೆ ಸೇನಾಪಡೆ ಶೋಪಿಯಾನ್ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಬದಲಾಗಿದ್ದು, ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿಗಳು ನಡೆಯುತ್ತಿದೆ.
ಉಗ್ರರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಭಾರೀ ಸಂಖ್ಯೆಯಲ್ಲಿ ಸ್ಥಳಕ್ಕೆ ಬಂದ ಜನರು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲು ಆರಂಭಿಸಿದ್ದವು. ಈ ವೇಳೆ ಜನರನ್ನು ಚದುರಿಸಲು ಭದ್ರತಾ ಪಡೆಗಳು ಆರಂಭಿಸಿದ್ದವು. ಘಟನೆಯಲ್ಲಿ ಮೂವರು ನಾಗರೀಕರು ಗಾಯಗೊಂಡಿದ್ದಾರೆ.
ಇನ್ನು ಉಗ್ರರ ವಿರುದ್ಧ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.