ಸದನಕ್ಕೆ ಎರಡು ದಿನ ಸಭಾಧ್ಯಕ್ಷರ ಗೈರು

 

ಬೆಂಗಳೂರು, ಜು.10- ಇಂದು ಮತ್ತು ನಾಳೆ ವಿಧಾನಸಭೆಯ ಕಾರ್ಯಕಲಾಪಗಳನ್ನು ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ನಿರ್ವಹಣೆ ಮಾಡಲಿದ್ದಾರೆ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ಸದನದಲ್ಲಿ ಪ್ರಕಟಿಸಿದರು.
ಮಾಜಿ ಸಚಿವ ಬಿ.ಎ.ಮೊಹಿದ್ದೀನ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯಲ್ಲಿ ತಾವು ಪಾಲ್ಗೊಳ್ಳುತ್ತಿದ್ದು, ಇಂದು ಮತ್ತು ನಾಳೆ ತಾವು ಸದನದಲ್ಲಿರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಉಪ ಸಭಾಧ್ಯಕ್ಷರು ಸದನ ಕಾರ್ಯಕಲಾಪಗಳ ನಿರ್ವಹಣೆ ಮಾಡಲಿದ್ದಾರೆ. ಅವರು ಹೊಸಬರಾಗಿರುವುದರಿಂದ ಸದಸ್ಯರು ಸಹಕರಿಸಬೇಕು ಎಂದು ಸಭಾಧ್ಯಕ್ಷರು ಮನವಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ