
ಕೋಲ್ಕತ್ತಾ, ಜು.10- ಅಂತಾರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯ ಮುಖ್ಯಸ್ಥನೊಬ್ಬ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಗುರಿಯಾಗಿದ್ದಾನೆ. ಕೋಲ್ಕತ್ತಾದ ಬೋ ಬಜಾರ್‍ನಲ್ಲಿರುವ ಸರ್ಕಾರೇತರ ಸಂಸ್ಥೆಯ ಕಚೇರಿಗೆ ನನ್ನನ್ನು ಹರಿದೇವಪುರದಿಂದ ಕರೆತಂದು ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಪೆÇಲೀಸರಿಗೆ ದೂರು ನೀಡಿದ್ದಾರೆ. ಮಹಿಳೆ ನೀಡಿದ ದೂರನ್ನಾಧರಿಸಿ ಕಾರ್ಯಾಚರಣೆಗಿಳಿದ ಪೆÇಲೀಸರು ಹೌರಾದಲ್ಲಿರುವ ಅತ್ಯಾಚಾರ ಆರೋಪಿ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.