ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ – ಶಾಸಕ ಗೋವಿಂದ ಕಾರಜೋಳ

 

ಬೆಂಗಳೂರು, ಜು.11-ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರು ಕೂಡ ಸಂಕಷ್ಟದಲ್ಲಿದ್ದು ಸರ್ಕಾರ ಪರಿಹಾರ ನೀಡಬೇಕೆಂದು ಬಿಜೆಪಿ ಶಾಸಕ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿ ಒತ್ತಾಯಿಸಿದರು.
ಪ್ರಸಕ್ತ ಆಯವ್ಯಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದ್ರಾಕ್ಷಿ ಮತ್ತು ದಾಳಿಂಬೆ ಬೆಳೆಗಾರರಿಗೆ ಸರ್ಕಾರ ಸೂಕ್ತ ಪರಿಹಾರವನ್ನು ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.
ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ವಿಜಯಪುರ, ಬಾಗಲಕೋಟೆ ಭಾಗಕ್ಕೆ 100 ಕೋಟಿ ರೂ. ವಿಶೇಷ ಪ್ಯಾಕೇಜ್‍ಘೋಷಿಸಬೇಕು. ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಹೇಳಿದರು.
ಬಾಗಲಕೋಟೆ ಅಥವಾ ಬಾದಾಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ