ಉತ್ತರ ಖಂಡದಲ್ಲಿ ಮೇಘಸ್ಫೋಟ; 7ಮಂದಿ ಸಾವು, ಮುಚ್ಚಿದ ಶಾಲೆ, ಕೊಚ್ಚಿಹೋದ ಸೇತುವೆ

ಉತ್ತರಾಖಂಡ: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ರಾಜಧಾನಿ ಡೆಹರಾಡೂನ್ ನಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ,
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಸೇತುವೆಗಳು ಕೊಚ್ಚಿ ಹೋಗಿವೆ, ಮುಂದಿನ ಮೂರು ದಿನಗಳು ಕೂಡ ಅಪಾರ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡೆಹ್ರಾಡೂನ್ ನಲ್ಲಿ ಕಟ್ಟಡ ಕುಸಿದು ನಾಲ್ವರು ಮೃತ ಪಟ್ಟಿದ್ದರು, ದಲನ್ ವಾಲಾ, ಶಹಸಾ ಪುರ ಮತ್ತು ಬಲ್ಲಿವಾಲದಲ್ಲಿ ತಲಾ ಒಬ್ಬೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ರಾಜ್ಯದ ಹಲವು ಹೆದ್ದಾರಿಗಳಲ್ಲಿ ಭೂಕುಸಿತ ಉಂಟಾಗಿರುವುದರಿಂದ ರಸ್ತೆಗಳು ಬಂದ್ ಆಗಿವೆ, ರಾಷ್ಟ್ರೀಯ ಹೆದ್ದಾರಿ 94ರ  ಚಾಂಬಾ, ಮತ್ತು ಹೃಷಿಕೇಶ ರಸ್ತೆಗಳು ಬಂದ್ ಆಗಿವೆ.
ದಕ್ಷಿಣ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಸೇತುವೆಗಳು ಕೊಚ್ಚಿ ಹೋಗಿವೆ. ಮುಂದಿನ ಮೂರು ದಿನಗಳಲ್ಲಿ ಚಮೋಲಿ, ಪೌರಿ.ಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿಎದ ಎಂದು ಎಚ್ಚರಿಸಲಾಗಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ