ಆ್ಯಂಬುಲೆನ್ಸ್ ವಾಹನ ಡಿಕ್ಕಿ ಮಹಿಳೆ ಸಾವು

ಗೌರಿಬಿದನೂರು, ಜು.12-ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುವ ಆತುರದಲ್ಲಿ ಅತಿವೇಗವಾಗಿ ಬಂದ ಆ್ಯಂಬುಲೆನ್ಸ್ ವಾಹನ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಲ್ಲಾಳಬೊಮ್ಮಸಂದ್ರ ಗ್ರಾಮದಲ್ಲಿ ಜರುಗಿದೆ. ಬಿ.ಬೊಮ್ಮಸಂದ್ರ ಗ್ರಾಮದ ವಾಸಿ ಅಶ್ವತ್ಥಮ್ಮ (55) ಮೃತಪಟ್ಟ ದುರ್ದೈವಿ. ಆ್ಯಂಬುಲೆನ್ಸ್‍ವೊಂದು ರೋಗಿಯನ್ನು ಆಸ್ಪತ್ರೆಗೆ ಕರೆತರುವ ವೇಗದಲ್ಲಿ ಗ್ರಾಮದ ಪಾದಚಾರಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಅಶ್ವತ್ಥಮ್ಮಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಪೆಟ್ಟಾಗಿದ್ದು , ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸುವಾಗ ಮಾರ್ಗದ ಮಧ್ಯದಲ್ಲಿ ಮೃತಪಟ್ಟಿದ್ದಾಳೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ