ಚಿಕ್ಕಮಗಳೂರು, ಜು.12- ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನರ ಆತಂಕ ಕೂಡ ಹೆಚ್ಚಾಗಿದೆ. ಶೃಂಗೇರಿ, ಮೂಡಿಗೆರೆ, ಎನ್‍ಆರ್ ಪುರ, ಕುದುರೆಮುಖ, ಹೊರನಾಡು, ಆಗುಂಬೆ ಸೇರಿದಂತೆ ಜಿಲ್ಲೆಯಾದ್ಯಂತ ಬಿರುಸಿನ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಕಳಸಾ-ಹೊರನಾಡು ಸಂಪರ್ಕ ಕಡಿತಗೊಂಡಿದ್ದು, ಈ ಭಾಗದಲ್ಲಿ ಬರುವ ಹೆಬ್ಬಾಳ ಸೇತುವೆ ಇದೇ ತಿಂಗಳಲ್ಲಿ ಆರನೆ ಬಾರಿ ನೀರಿನಲ್ಲಿ ಮುಳುಗಿದೆ. ಇದರಿಂದಾಗಿ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಸಂಪರ್ಕ ಬಂದ್ ಆಗಿದೆ. ಸೇತುವೆ ಮೇಲೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನು ಎನ್‍ಆರ್ ಪುರ ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕೆಯಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.