ಮಕ್ಕಳ ಮುಂದೆ ಶಿಕ್ಷಕರನ್ನು ದಂಡಿಸಿದರೆ ಸಹಿಸುವುದಿಲ್ಲ: ಎನ್.ಮಹೇಶ್

 

ಬೆಂಗಳೂರು, ಜು.12-ಫಲಿತಾಂಶವನ್ನು ಮಾನದಂಡವನ್ನಾಗಿಸಿಕೊಂಡು ಮಕ್ಕಳ ಮುಂದೆ ಶಿಕ್ಷಕರನ್ನು ನಿಂದಿಸುವ ಅಧಿಕಾರಿಗಳ ಕ್ರಮವನ್ನು ಸಹಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ವಿಧಾನಪರಿಷತ್‍ನಲ್ಲಿ ತಿಳಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಫಲಿತಾಂಶವನ್ನು ಮಾನದಂಡವನ್ನಾಗಿರಿಸಿಕೊಂಡು ಮಕ್ಕಳ ಮುಂದೆ ಅಧಿಕಾರಿಗಳು ಶಿಕ್ಷಕರನ್ನು ನಿಂದಿಸಿರುವ ವಿಷಯ ಹಲವೆಡೆ ಕೇಳಿ ಬಂದಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.
ಅಗತ್ಯವಿರುವೆಡೆ ಶಿಕ್ಷಕರನ್ನು ನೇಮಕ ಮಾಡಲು ಶೀಘ್ರ ಕ್ರಮಕೈಗೊಳ್ಳಲಾಗುವುದು. ಫಲಿತಾಂಶ ಕಡಿಮೆಯಾಗಲು ಶಿಕ್ಷಕರ ಕೊರತೆ ಕೂಡ ಕಾರಣವಾಗಿದೆ. ಶಿಕ್ಷಕರ ನೇಮಕವನ್ನು ಹಂತಹಂತವಾಗಿ ಮಾಡಲಾಗುವುದು. ರಾಜ್ಯದಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರಿಗೆ, ಉಪನ್ಯಾಸಕರಿಗೆ ಫಲಿತಾಂಶವನ್ನು ಮಾನದಂಡವನ್ನಾಗಿಸಿ ಸಂಬಳ ತಡೆಹಿಡಿದಿರುವುದನ್ನು ರದ್ದು ಮಾಡಲಾಗಿದೆ ಎಂದು ಸಚಿವರು ಸದಸ್ಯರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ