
ಬೆಂಗಳೂರು, ಜು.12- ನಟ ಯಶ್ ಕೊಲೆಗೆ ಸಂಚು ರೂಪಿಸಲಾಗಿತ್ತು ಎಂಬುದರ ಬಗ್ಗೆ ನಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಸಿಸಿಬಿ ವಿಭಾಗದ ಜಂಟಿ ಪೆÇಲೀಸ್ ಆಯುಕ್ತ ಸತೀಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸುದ್ದಿಯನ್ನು ಯಾರು ಹಬ್ಬಿಸಿದ್ದರು ಎಂಬ ಬಗ್ಗೆ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಇತ್ತೀಚೆಗೆ ನಟ ಯಶ್ ಅವರು ನಮ್ಮನ್ನು ಭೇಟಿ ಮಾಡಿಲ್ಲ. ಯಾವುದೇ ದೂರು ಸಹ ಅವರು ಕೊಟ್ಟಿಲ್ಲ ಎಂದು ಹೇಳಿದರು.
ರೌಡಿಗಳ ವಿಚಾರಣೆ ಸಂದರ್ಭದಲ್ಲೂ ಈ ಮಾಹಿತಿ ನಮಗೆ ಲಭ್ಯವಾಗಿಲ್ಲ ಎಂದು ಸತೀಶ್‍ಕುಮಾರ್ ತಿಳಿಸಿದ್ದಾರೆ.