ಲಾರಿಗೆ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಚಾಲಕ ಸಾವು

ಶಿರಾ, ಜು.13- ಟಯರ್ ಪಂಕ್ಚರ್ ಆಗಿ ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ 4.30ರಲ್ಲಿ ಸಂಭವಿಸಿದೆ. ಇದೇ ವೇಳೆ ಕೆಎಸ್‍ಆರ್‍ಟಿಸಿ ಬಸ್‍ಗೆ ಹಿಂದಿನಿಂದ ಮತ್ತೊಂದು ಬಸ್ ಕೂಡ ಡಿಕ್ಕಿ ಹೊಡೆದಿದೆ. ಹೊಸಪೇಟೆ ಡಿಪೆÇೀದ ಸಾರಿಗೆ ಬಸ್ ಬಳ್ಳಾರಿಯಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಎನ್‍ಎಚ್-48ರ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಾನಂಗಿ ಗ್ರಾಮದ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿ ಕಾಣದೆ ವೇಗವಾಗಿ ಕೆಎಸ್‍ಆರ್‍ಟಿಸಿ ಚಾಲಕ ಬಸ್ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಸ್‍ನಲ್ಲಿ ಇಬ್ಬರು ಚಾಲಕರಿದ್ದು, ಒಬ್ಬರು ಚಾಲನೆ ಮಾಡುತ್ತಿದ್ದರು. ಮತ್ತೊಬ್ಬ ಹೆಚ್ಚುವರಿ ಚಾಲಕ ಹನುಮಂತಪ್ಪ (48) ಎಂಬುವವರು ಎಡಬದಿಯಲ್ಲಿ ಕುಳಿತಿದ್ದಾಗ ಅಪಘಾತದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತವಾಗುತ್ತಿದ್ದಂತೆ ಹಿಂದಿನಿಂದ ಬಂದ ಇನ್ನೊಂದು ಖಾಸಗಿ ಬಸ್ ಕೂಡ ಇದೇ ಬಸ್‍ಗೆ ಡಿಕ್ಕಿ ಹೊಡೆದಿದೆ. ಎರಡೂ ಬಸ್‍ಗಳಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಶಿರಾ, ತುಮಕೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸುವಾಗ ಪಾರ್ಕಿಂಗ್ ಲೈಟ್ ಅಥವಾ ಇಂಡಿಕೇಟರ್‍ಗಳನ್ನು ಹಾಕಿರಬೇಕು. ಆದರೆ, ಲಾರಿ ಚಾಲಕ ಅದನ್ನು ಮಾಡದೆ ರಸ್ತೆಯಲ್ಲೇ ನಿಲ್ಲಿಸಿರುವುದರಿಂದ ಈ ಅಪಘಾತ ಸಂಭವಿಸಿದೆ. ಸುದ್ದಿ ತಿಳಿಸಿದ ಶಿರಾ ಠಾಣೆ ಇನ್ಸ್‍ಪೆಕ್ಟರ್ ಲಕ್ಷ್ಮಯ್ಯ ಹಾಗೂ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಅಪಘಾತದಲ್ಲಿ ಮೃತಪಟ್ಟಿದ್ದ ಲಾರಿ ಚಾಲಕನ ಶವವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ ಸರಣಿ ಅಪಘಾತ ಸಂಭವಿಸಿದ್ದರಿಂದ ಶಿರಾ-ತುಮಕೂರು ಮಾರ್ಗದಲ್ಲಿ ಸುಮಾರು 7 ಗಂಟೆವರೆಗೂ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು.
ಸಂಚಾರಿ ಪೆÇಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ