ಮಲೆನಾಡು ಭಾಗದಲ್ಲಿ ಭಾರೀ ಮಳೆ, ಹೇಮಾವತಿ ಗರಿಷ್ಠ ಮಟ್ಟ

ಹಾಸನ, ಜು.13- ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು , ಯಾವುದೇ ಸಂದರ್ಭದಲ್ಲಾದರೂ ನೀರನ್ನು ಹೊರ ಬಿಡುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು , ಗೊರೂರು ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 2922 ಅಡಿಗಳು (37.103 ಟಿಎಂಸಿ) ಇಂದಿನ ನೀರಿನ ಮಟ್ಟ 2,917.41 ಅಡಿ (32.79 ಟಿಎಂಸಿ) ಜಲಾಶಯದ ಒಳ ಹರಿವು 26,477 ಕ್ಯೂಸೆಕ್ಸ್. ಜಲಾಶಯದ ಹೊರ ಹರಿವು 3,220 ಕ್ಯೂಸೆಕ್ ಈ ರೀತಿ ಇದ್ದು ಇದೇ ರೀತಿ ಮಳೆ ಮುಂದುವರೆದರೆ ಜಲಾಶಯ ಇನ್ನೊಂದು ದಿನದಲ್ಲಿ ಸಂಪೂರ್ಣವಾಗಿ ಭರ್ತಿಯಾಗಲಿದೆ.
ಹಾಗಾಗಿ ಯಾವುದೇ ಕ್ಷಣದಲ್ಲಾದರೂ ನೀರನ್ನು ಹೊರ ಬಿಡುವ ಸಾಧ್ಯತೆ ಇದ್ದು , ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ