ಬೆಂಗಳೂರು, ಜು.14- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನಕ್ಕೆ ಇಂದು ಆಗಮಿಸಿದರು.
ಈ ವೇಳೆ ಮುಖ್ಯಮಂತ್ರಿ ಅವರಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ವಿವಿಧ ಜನಪದ ಕಲಾತಂಡಗಳ ಮೂಲಕ ಕುಮಾರಸ್ವಾಮಿ ಅವರನ್ನು ಬರಮಾಡಿಕೊಳ್ಳಲಾಯಿತು.
ಕಿಕ್ಕಿರಿದು ಸೇರಿದ ಕಾರ್ಯಕರ್ತರ, ಅಭಿಮಾನಿಗಳ ಸಮ್ಮುಖದಲ್ಲಿ ಕುಮಾರಸ್ವಾಮಿ ಅವರನ್ನು ಅಭಿನಂದಿಸಲಾಯಿತು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನೂತನ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರನ್ನು ಸನ್ಮಾನಿಸಲಾಯಿತು.
ಜೆಡಿಎಸ್‍ನ ರಾಜ್ಯಮಟ್ಟದ ಭೂತ್ ಸಮಿತಿ ಹಾಗೂ ಬೆಂಗಳೂರು ನಗರ ಘಟಕ ವತಿಯಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನೂತನ ಜೆಡಿಎಸ್ ಸಚಿವರು, ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ, ಮಾಜಿ ಸಚಿವ ಎಚ್.ವಿಶ್ವನಾಥ್, ಸಚಿವರಾದ ಎಂ.ಸಿ.ಮನಗೂಳಿ, ವೆಂಕರಾವ್‍ನಾಡಗೌಡ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಮರಿತಿಬ್ಬೇಗೌಡ, ಭೋಜೇಗೌಡ, ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ, ಶಾಸಕರಾದ ಕೆ.ಗೋಪಾಲಯ್ಯ, ಡಾ.ಕೆ.ಅನ್ನದಾನಿ, ಜೆಡಿಎಸ್ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣರಾವ್ ಮತ್ತಿತರರು ಪಾಲ್ಗೊಂಡಿದ್ದರು.