ವಿಶೇಷ ಶಿಕ್ಷಕರ ಸಮಾವೇಶ

 

ಬೆಂಗಳೂರು, ಜು.14-ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ ಆಯೋಜಿಸಿದ್ದ ರಾಜ್ಯಮಟ್ಟದ ವಿಶೇಷ ಶಾಲೆಗಳ, ವಿಶೇಷ ಮಕ್ಕಳ ಹಾಗೂ ವಿಶೇಷ ಶಿಕ್ಷಕರ, ಶಿಕ್ಷಕೇತರ ಸಿಬ್ಬಂದಿಗಳ ಸಮಾವೇಶವಾದ ಸ್ಪಂದನ-2018ಅನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು.
ನಗರದ ಶಿಕ್ಷಕರ ಸದನದಲ್ಲಿ ನಡೆದ ಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಬುದ್ದಿಮಾಂಧ್ಯ ಮಕ್ಕಳು, ವಿಶೇಷ ಶಾಲಾ ಶಿಕ್ಷಕರು, ಪೆÇೀಷಕರು, ಶಿಕ್ಷಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವಿಕಲಚೇತನರ ಅಭಿವೃದ್ಧಿ ನಿಗಮ ಸ್ಥಾಪನೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಬೇರ್ಪಡಿಸಬೇಕು ಎಂಬ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ ಮಾಡಿತು.
ಹಿರಿಯ ನಾಗರಿಕರ ಹಾಗೂ ಬುದ್ದಿಮಾಂಧ್ಯ ಮಕ್ಕಳಿಗೆ ಬಜೆಟ್‍ನಲ್ಲಿ ಪ್ರತ್ಯೇಕ ಅನುದಾನ ಒದಗಿಸಬೇಕು. ಜತೆಗೆ ಆರ್ಥಿಕ ಸೌಲಭ್ಯ, ಸೇವಾ ಭದ್ರತೆ, ನಿವೃತ್ತಿ ನಂತರದ ಸೌಲಭ್ಯಗಳನ್ನು ನೀಡುವುದು, ವಿಶೇಷ ಶಾಲೆಯಲ್ಲೂ ಭಯೋಮೆಟ್ರಿಕ್ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿತು.
ವಸತಿ ಸಚಿವ ಯು.ಟಿ.ಖಾದರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ