ಪಾಕ್ ಇತಿಹಾಸದಲ್ಲೇ ಭೀಕರ ದಾಳಿ: ಚುನಾವಣೆಯಲ್ಲಿ ರ್ಯಾ ಲಿಯಲ್ಲಿ ಬಾಂಬ್ ಸ್ಫೋಟಕ್ಕೆ 133 ಬಲಿ

ಕ್ವೆಟ್ಟಾ( ಪಾಕಿಸ್ತಾನ): ಪಾಕಿಸ್ತಾನ ಇತಿಹಾಸದಲ್ಲೇ ಮತ್ತೊಂದು ಭೀಕರ ಭಯೋತ್ಪಾದಕರ ದಾಳಿ ನಡೆದಿದ್ದು, ಬಲೂಚಿಸ್ತಾನ್ ಪ್ರಾಂತ್ಯದ ರಾಜಕೀಯ ಚುನಾವಣೆ ರ್ಯಾೀಲಿವೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಮೃತರ ಸಂಖ್ಯೆ 133ಕ್ಕೇರಿದೆ. ಘಟನೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾಕ್ಕೆ ಸಮೀಪದ ಮಸ್ತಂಗ್ ಪಟ್ಟಣದಲ್ಲಿ ನಡೆಯುತ್ತಿದ್ದ ಚುನಾವಣಾ ಬಹಿರಂಗ ಸಭೆಯಲ್ಲಿ ಏಕಕಾಲದಲ್ಲಿ ಎರಡು ಬಾಂಬ್ ಸ್ಫೋಟಗೊಂಡಿರುವ ಪರಿಣಾಮ ಇಷ್ಟೊಂದು ಜನರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಜುಲೈ 25 ರಂದು ನಡೆಯುವ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೂ ಮುನ್ನ ಬಾಂಬ್ ಸ್ಫೋಟಗೊಳ್ಳುತ್ತಿರುವ ಎರಡನೇ ಪ್ರಕರಣ ಇದಾಗಿದೆ.
ಇನ್ನು ಘಟನೆಯಲ್ಲಿ ಬಲೂಚಿಸ್ತಾನ ಅವಾಮಿ ಪಾರ್ಟಿಯ ಮುಖಂಡ ಸಿರಾಜ್ ರೈಸಾನಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಉಳಿದಂತೆ ಘಟನೆಯಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಈ ಬಾಂಬ್ ದಾಳಿಯ ಹೊಣೆ ಹೊತ್ತುಕೊಂಡಿರುವುದಾಗಿ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ