2018ರ ವಿಧಾನಸಭೆ ಚುನಾವಣೆಯ ಸೋಲಿನ ಪರಾಮರ್ಶೆ

 

ಬೆಂಗಳೂರು, ಜು.15- ಮುಂಬರುವ 2019ರ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುತ್ತಿರುವ ನೂತನ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು 2018ರ “ಧಾನಸಭೆ ಚುನಾವಣೆಯ ಸೋಲಿನ ಪರಾಮರ್ಶೆ ನಡೆಸಲು ಮುಂದಾಗಿದ್ದಾರೆ.
ನಮ್ಮ ಪಕ್ಷ ಕಳೆದ ಐದು ವರ್ಷಗಳಲ್ಲಿ ಸಮರ್ಪಕ ಆಡಳಿತ ನಡೆಸಿದರೂ ಸೋಲಾಗಲು ಕಾರಣಗಳೇನು, ಪಕ್ಷ “ರೋಧಿ ಚಟುವಟಿಕೆಗಳೇ, ಜಾತಿ ಅಂಶವೇ, ಅಪಪ್ರಚಾರವೇ ಎಂಬಿತ್ಯಾದಿ “ಷಯಗಳ ಬಗ್ಗೆ ಸಮಗ್ರ ವರದಿಯನ್ನು ಒಂದು ವಾರದಲ್ಲಿ ನೀಡುವಂತೆ ಸ”ುತಿಯನ್ನು ರಚಿಸಿದ್ದಾರೆ.
ಸ”ುತಿ ಎಲ್ಲ ಕ್ಷೇತ್ರಗಳಲ್ಲೂ ಸಭೆ ನಡೆಸಿ ಅಧ್ಯಕ್ಷರಿಗೆ ವರದಿ ಸಲ್ಲಿಸಬೇಕಾಗಿದೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರ ಆಡಳಿತದಲ್ಲಿ ಜನಪರ ಕೆಲಸಗಳು, ಜನಪ್ರಿಯ ಯೋಜನೆಗಳು ಜಾರಿಯಾಗಿದ್ದರೂ ಪಕ್ಷ ಗೆಲ್ಲಲು ಸಾಧ್ಯವಾಗಲಿಲ್ಲ. ಇದಕ್ಕೆ ಕಾರಣವಾದ ಅಂಶಗಳನ್ನು ಹೆಕ್ಕಿ ತೆಗೆಯಬೇಕು. ಮುಂಬರುವ ಲೋಕಸಭೆ ಚುನಾವಣೆಗೆ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಮತ್ತು ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎಂಬ “ನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಹೊಸ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ತಮ್ಮ ಪದಗ್ರಹಣ ಸಮಾರಂಭದಲ್ಲಿ ಎಲ್ಲ ನಾಯಕರುಗಳು ಆಗ”ುಸಿದ್ದರಿಂದ ಸಹಜವಾಗಿಯೇ ಅವರು ಜೋಷ್‍ನಲ್ಲಿದ್ದು, ಎಲ್ಲ “ರಿಯ ನಾಯಕರನ್ನು “ಶ್ವಾಸಕ್ಕೆ ತೆಗೆದುಕೊಂಡು ಹೊಸ ಹೊಸ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಈ “ಂದಿನ ಸೋಲಿನ ಪರಾಮರ್ಶೆ ನಡೆಸಿ ಸ”ುತಿ ಕೊಡುವ ವರದಿ ಆಧಾರದ ಮೇಲೆ ಜಿಲ್ಲಾವಾರು ಸಭೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ