ಬೆಂಗಳೂರು, ಜು.15- ಸಚಿವ ಸಂಪುಟ “ಸ್ತರಣೆ ಹಾಗೂ ನಿಗಮ ಮಂಡಳಿ ನೇಮಕಾತಿ “ಷಯವಾಗಿ ಹೈಕಮಾಂಡ್‍ನೊಂದಿಗೆ ಚರ್ಚಿಸಲು ಜು.18ರಂದು ದೆಹಲಿಗೆ ಭೇಟಿ ನೀಡುತ್ತಿದ್ದು, ಒಂದು ಹಂತದಲ್ಲಿ ನಿಗಮ ಮಂಡಳಿ ನೇಮಕಾತಿ ಹಾಗೂ ಸಂಪುಟ “ಸ್ತರಣೆಯನ್ನು ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜು.18ರಂದು ದೆಹಲಿಯಲ್ಲಿ ಕಾವೇರಿ “ಚಾರವನ್ನು ಸಂಸತ್‍ನಲ್ಲಿ ಪ್ರಸ್ತಾಪಿಸುವ ಬಗ್ಗೆ ಸಂಸದರ ಸಭೆ ಕರೆಯಲಾಗಿದೆ. ಸಭೆಯಲ್ಲಿ ನಾನು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಭಾಗವ”ಸುತ್ತಿದ್ದೇವೆ ಎಂದರು.
ಇದೇ ವೇಳೆ ಹೈಕಮಾಂಡ್ ಜತೆ ಚರ್ಚೆ ಮಾಡುತ್ತೇವೆ. ಸಚಿವ ಸಂಪುಟ “ಸ್ತರಣೆ ಹಾಗೂ ನಿಗಮ ಮಂಡಳಿ ನೇಮಕಾತಿ ಎರಡು “ಷಯ ಕುರಿತು ಚರ್ಚೆ ಮಾಡಿ ಎಲ್ಲವನ್ನೂ ಭರ್ತಿ ಮಾಡುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು.
ಶೀಘ್ರವೇ ನಿಗಮ ಮಂಡಳಿಗಳಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ಶಾಸಕರಿಗೆ ಅವಕಾಶ ಸಿಗಲಿವೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.