ವಿದ್ಯಾರ್ಥಿ ನೇಣಿಗೆ ಶರಣು

ಮೈಸೂರು, ಜು.15- ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ಮನನೊಂದು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಜಯಕುಮಾರ್ (25) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಈತ ಮೂಲತಃ ರಾಯಚೂರಿನವನಾಗಿದ್ದು, ಹೊರವಲಯದಲ್ಲಿರುವ ವಿಟಿಯು ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದನು.
ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಈತ ಮನನೊಂದು ಕಾಲೇಜಿನ ಹಾಸ್ಟೆಲ್‍ನಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿ ಪೆÇಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮೈಸೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ