ಬೆಂಗಳೂರು, ಜು.16- ಮಕ್ಕಳ ಕಳ್ಳರ ವದಂತಿಯ ನೆಪದಲ್ಲಿ ತಪ್ಪು ಸಂದೇಶಗಳನ್ನು ಹರಡುವವರ ವಿರುದ್ಧ ಕಾನೂನಿನ ರೀತಿ ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಂ ಠಾಣೆ ಪೆÇಲೀಸರಿಗೆ ಸೂಚನೆ ನೀಡಿರುವುದಾಗಿ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಬೀದರ್ನಲ್ಲಿ ಮಕ್ಕಳ ಕಳ್ಳರು ಎಂಬ ಅನುಮಾನದ ಮೇಲೆ ಗುಂಪೆÇಂದು ಅಮಾಯಕರ ಮೇಲೆ ಹಲ್ಲೆ ನಡೆಸಿತ್ತು. ರಾಜ್ಯದಲ್ಲಿ ಈ ರೀತಿಯ ಘಟನೆಗಳು ಅಲ್ಲಲ್ಲಿ ಪುನರಾವರ್ತನೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್ ಅವರು ಬೀದರ್ ಘಟನೆಗೆ ಸಂಬಂಧಪಟ್ಟಂತೆ 13 ಜನರನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದರು.
ತಪ್ಪು ಮಾಡಿದವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲ ತಾಣಗಳಲ್ಲಿ ಅನಗತ್ಯವಾಗಿ ತಪ್ಪು ಸಂದೇಶಗಳನ್ನು ಬಿತ್ತರಿಸಿ ಆತಂಕ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸೈಬರ್ ಕ್ರೈಂ ಪೆÇಲೀಸ್ ಠಾಣೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ದೇವೇಗೌಡರ ಹೇಳಿಕೆಗೆ ಪರಂ ಬೆಂಬಲ:
ಉತ್ತರ ಕರ್ನಾಟಕ ಭಾಗಕ್ಕೆ ಯಾರ ಕಾಲದಲ್ಲಿ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ ಎಂದು ಶ್ವೇತಪತ್ರ ಹೊರಡಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಪರೋಕ್ಷ ಬೆಂಬಲ ವ್ಯಕ್ತಪಡಿಸಿದರು.
ಸಾರ್ವಜನಿಕರಿಗೆ ಮಾಹಿತಿ ತಿಳಿಯಬೇಕು. ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ಪದೇ ಪದೇ ಆರೋಪಗಳು ಕೇಳಿ ಬರುತ್ತಿದೆ. ಆ ಭಾಗಕ್ಕೆ ಬಜೆಟ್ನಲ್ಲಿ ಎಷ್ಟು ಹಣ ಮೀಸಲಿಡಲಾಗಿತ್ತು. ಎಷ್ಟು ಹಣ ಬಿಡುಗಡೆಯಾಗಿದೆ. ನೀರಾವರಿ, ರಸ್ತೆ, ಕಟ್ಟಡ, ಸೇತುವೆ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳಿಗೆ ಎಷ್ಟು ಖರ್ಚು ಮಾಡಲಾಗಿದೆ ಎಂಬ ಮಾಹಿತಿ ಜನರಿಗೆ ತಿಳಿಯಬೇಕಿದೆ ಎಂದರು.
ನಂಜುಂಡಪ್ಪ ಆಯೋಗ ರಾಜ್ಯದ 114 ತಾಲ್ಲೂಕುಗಳು ಸಮನಾಂತರವಾಗಿ ಹಿಂದುಳಿದಿವೆ ಎಂದು ವರದಿ ನೀಡಿತ್ತು. ಇತರೆ ತಾಲ್ಲೂಕುಗಳಂತೆ ಅವುಗಳನ್ನೂ ಅಭಿವೃದ್ಧಿಪಡಿಸಲು ಕಾಲ ಕಾಲಕ್ಕೆ ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ 371ಜೆ ಅಡಿ ವಿಶೇಷ ಸ್ಥಾನಮಾನ ನೀಡಿ ಪ್ರತ್ಯೇಕವಾದ ಅನುದಾನವನ್ನೂ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಇನ್ಫೋಸಿಸ್ನ ಸಂಸ್ಥಾಪಕರಲ್ಲಿ ಒಬ್ಬರಾದ ಸುಧಾಮೂರ್ತಿ ಅವರು ಇಂದು ತಮ್ಮನ್ನು ಭೇಟಿ ಮಾಡಿದ್ದರು. 150 ಕೋಟಿ ರೂ. ವೆಚ್ಚದಲ್ಲಿ ಒಂದು ಮೆಟ್ರೋ ಸ್ಟೇಷನನ್ನು ಅವರು ಅಭಿವೃದ್ಧಿಪಡಿಸುತ್ತಿದ್ದು, ಅದರ ಉದ್ಘಾಟನಾ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಲು ಬಂದಿದ್ದರು. ಆ ಸಂದರ್ಭದಲ್ಲಿ ಅವರೊಂದಿಗೆ ಮಾತುಕತೆ ನಡೆಸಿ ಪೆÇಲೀಸ್ ಠಾಣೆ, ಪೆÇಲೀಸ್ ವಸತಿ ಗೃಹಣ ನಿರ್ಮಾಣಕ್ಕೂ ಸಹಕಾರ ನೀಡುವಂತೆ ಮನವಿ ಮಾಡಿದ್ದೆನೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಿರ್ದಿಷ್ಟವಾದ ಯೋಜನೆ ಕೊಟ್ಟರೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಮೆಟ್ರೋ ಮಾರ್ಗಗಳ ರಸ್ತೆ ಸುಧಾರಣೆ:
ನಮ್ಮ ಮೆಟ್ರೋ ಮಾರ್ಗದ ಕೆಳಭಾಗದಲ್ಲಿರುವ ರಸ್ತೆಗಳನ್ನು ಸುಧಾರಣೆ ಮಾಡುವಂತೆ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ರಸ್ತೆ ಮಾರ್ಗದ ಕೆಳ ಭಾಗದಲ್ಲಿರುವ ಡಬ್ರೀಸ್ಗಳನ್ನು ತೆರವುಗೊಳಿಸಬೇಕು. ರಸ್ತೆಯುದ್ದಕ್ಕೂ ಹೂ ಗಿಡಗಳನ್ನು ನೆಡಬೇಕು ಎಂದು ಸೂಚನೆ ನೀಡಲಾಗಿದೆ.
ಮೆಟ್ರೋಗೆ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿರುವ ಅಜಯ್ಸೇಠ್ ಅವರು ಇಂದು ತಮ್ಮನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಪ್ರಗತಿಯಲ್ಲಿರುವ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದೇನೆ. ಹೊಸ ಯೋಜನೆಗಳಿಗೆ ಶೀಘ್ರ ಅನುಮತಿ ನೀಡಿ ಅಗತ್ಯ ಹಣಕಾಸು ಸೌಲಭ್ಯ ಒದಗಿಸುವಂತೆ ಅವರು ಮನವಿ ಮಾಡಿದ್ದಾರೆ ಎಂದು ಹೇಳಿದರು.
ಪ್ರತಿ ಕ್ಷೇತ್ರಕ್ಕೂ ಭೇಟಿ:
ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ನಾನು ಭೇಟಿ ಕೊಡುತ್ತೇನೆ. ಅದಕ್ಕೂ ಮೊದಲ ಆಯಾ ಕ್ಷೇತ್ರಗಳಲ್ಲಿರುವ ಸಮಸ್ಯೆ ಏನು ಎಂಬ ಬಗ್ಗೆ ಮಾಹಿತಿ ಪಡೆಯಲು ಇಂದು ಬೆಂಗಳೂರಿನ ಶಾಸಕರ ಸಭೆ ಕರೆದಿದ್ದೇನೆ. ಅವರಿಂದ ಸಲಹೆ ಸ್ವೀಕರಿಸಿ ಕ್ಷೇತ್ರದ ಭೇಟಿಯ ವೇಳೆ ಸಮಸ್ಯೆಗಳಿಗೆ ಪರಿಹಾರವನ್ನು ಘೋಷಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಗಾಲ್ಫ್ಕ್ಲಬ್ನಿಂದ ಇಂದು ಬೆಳಗ್ಗೆ ಬಾಲೊಂದು ಮುಖ್ಯಮಂತ್ರಿ ಅಧಿಕೃತ ಕಚೇರಿ ಕೃಷ್ಣಾದ ಮೇಲೆ ಬಿದ್ದಿದೆ. ಈ ಬಗ್ಗೆ ಗಾಲ್ಫ್ ಕ್ಲಬ್ನ ಕ್ಯಾಪ್ಟನ್ ಪ್ರದೀಪ್ ಅವರು ಇಂದು ಬೆಳಗ್ಗೆ ತಮ್ಮನ್ನು ಭೇಟಿ ಮಾಡಿದ್ದರು. ಇನ್ನು ಮುಂದೆ ಇಂತಹ ಅವಘಡ ನಡೆಯಲು ಅವಕಾಶ ಕೊಡುವುದಿಲ್ಲ. ಗಾಲ್ಫ್ ಕ್ಲಬ್ನ ಸುತ್ತಲೂ ಹಾಕಿರುವ ನೆಟ್ (ಪರದೆ)ಎತ್ತರವನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರು.
ಬಿಡಿಎ ಇತ್ತೀಚೆಗೆ ರಚಿಸಿದ್ದ ಮಾಸ್ಟರ್ ಪ್ಲಾನ್ (ಕ್ರಿಯಾ ಯೋಜನೆ)ಅನ್ನು ತಿರಸ್ಕರಿಸಿಲ್ಲ. ಅದನ್ನು ಪರಿಷ್ಕರಿಸುವಂತೆ ಸೂಚನೆ ನೀಡಿದ್ದೇನೆ. ಕ್ರಿಯಾ ಯೋಜನೆಯಲ್ಲಿ ಇನ್ನಷ್ಟು ಹೆಚ್ಚುವರಿ ಯೋಜನೆಗಳು ಸೇರಲು ಅವಕಾಶ ಇದೆ ಎಂಬ ಸಲಹೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪರಿಷ್ಕರಣೆಗೆ ಸೂಚಿಸಿರುವುದಾಗಿ ಪರಮೇಶ್ವರ್ ಹೇಳಿದರು.