ಬೆಂಗಳೂರು,ಜು.16- ಒಕ್ಕಲಿಗರ ಸಂಘದ ಕೇಂದ್ರ ಕಚೇರಿ ಮುಂದೆ ಹೆಚ್ಚುವರಿ ಸಿಬ್ಬಂದಿ ನೇಮಕವನ್ನು ಕೈಬಿಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಘದ ಅಧೀನ ಸಂಸ್ಥೆಗಳ ನೌಕರರ ಸಂಘ ಪ್ರತಿಭಟನೆ ನಡೆಸಿತು.
ಹೆಚ್ಚುವರಿ ಸಿಬ್ಬಂದಿ ನೇಮಕ ಕೈಬಿಡುವ ಬೇಡಿಕೆಯನ್ನು ಒಕ್ಕಲಿಗರ ಸಂಘದ ಆಡಳಿತ ಮಂಡಳಿ ಈಡೇರಿಸಿಲ್ಲ ಎಂದು ಆರೋಪಿಸಿ ಮತ್ತೆ ಪ್ರತಿಭಟನೆಯನ್ನು ಕೈಗೊಂಡಿದೆ. ಕಳೆದ ತಿಂಗಳು 12 ದಿನಗಳ ಕಾಲ ಪ್ರತಿಭಟನೆ ನಡೆಸಿತ್ತು. ಸಂಘದ ಕಾರ್ಯಕಾರಿ ಸಮಿತಿ ತೀರ್ಮಾನದಂತೆ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕಾತಿಯಿಂದ ಕೈಬಿಡುವ ಭರವಸೆ ನೀಡಿದ ನಂತರ ಮುಷ್ಕರವನ್ನು ನೌಕರರು ಕೈಬಿಟ್ಟಿದ್ದರು.
ಸಂಘದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಂಪೇಗೌಡ ಆಸ್ಪತ್ರೆಯ ವೈದ್ಯರು, ನರ್ಸ್‍ಗಳು ಸೇರಿದಂತೆ ಸಂಘದ ಅಧೀನ ಸಂಸ್ಥೆಗಳ ಹಲವು ನೌಕರರು ಪಾಲ್ಗೊಂಡಿದ್ದರು.






