ಮಾನವೀಯತೆ ಇದ್ದವರಿಗೆ ಕಣ್ಣೀರು ಬರುತ್ತದೆ – ಸಚಿವ ವೆಂಕಟರಾವ್ ನಾಡಗೌಡ

ಗಂಗಾವತಿ,ಜು.16- ಮಾನವೀಯತೆ ಇದ್ದವರಿಗೆ ಸಹಜವಾಗಿ ಭಾವುಕತೆಯಿಂದ ಕಣ್ಣೀರು ಬರುತ್ತದೆ. ಕಲ್ಲು ಹೃದಯಗಳಿಗೆ ಬರುವುದಿಲ್ಲ ಎಂದು ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಜೆಡಿಎಸ್ ಪಕ್ಷದ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಸಾಕಷ್ಟು ಕೆಲಸ ಮಾಡಿದರೂ ಟೀಕೆಗಳು ಬಂದಾಗ ಸಹಜವಾಗಿಯೇ ಕಣ್ಣೀರು ಬರುತ್ತದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿ, ಜೆಡಿಎಸ್ ಶಾಸಕರಿಗೆ ಅನುದಾನ ನೀಡಬಾರದೆಂಬ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲ ಪಕ್ಷದ ಶಾಸಕರಿಗೂ ಅಗತ್ಯವಾದ ಅನುದಾನ ನೀಡುವುದು ಜವಾಬ್ದಾರಿಯುತ ಸರ್ಕಾರದ ಕೆಲಸ. ಅನುದಾನ ತರುವಂತಹ ಸಾಮಥ್ರ್ಯ ನಮಗಿದೆ ಎಂದು ಸಚಿವರು ಸಮರ್ಥಿಸಿಕೊಂಡರು.
ಎಲ್ಲ ಭಾಗಗಳಲ್ಲೂ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು. ರಾಯಚೂರಿನಲ್ಲಿ ಪಶು ಸಂಗೋಪನೆ ಇಲಾಖೆಯ ವಿಭಾಗೀಯ ಕಚೇರಿ ಪ್ರಾರಂಭಿಸಲಾಗುವುದು. 150 ಖಾಲಿ ಪಶು ವೈದ್ಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಕೇವಲ 60 ವೈದ್ಯರು ಮಾತ್ರ ದಾಖಲಾತಿ ಪರಿಶೀಲನೆಗೆ ಬಂದಿದ್ದಾರೆ ಎಂದರು.
ರೈತರ ಸಾಲಮನ್ನಾ ಮಾಡಲು ತೆರಿಗೆ ಏರಿಕೆ ಅನಿವಾರ್ಯ ಎಂದು ಅವರು ಸಮರ್ಥಿಸಿಕೊಂಡರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ