![Varta Mitra News Varta Mitra News](http://kannada.vartamitra.com/wp-content/themes/mh-magazine/images/placeholder-content-news.png)
ಮೈಸೂರು, ಜು.16- ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 160 ಗ್ರಾಂ ಚಿನ್ನಾಭರಣ ಹಾಗೂ 75 ಸಾವಿರ ನಗದನ್ನು ಅಪಹರಿಸಿರುವ ಘಟನೆ ಸರಸ್ವತಿಪುರಂ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸರಸ್ವತಿಪುರಂ 2ನೆ ಕ್ರಾಸ್ ನಿವಾಸಿ ಚಂದ್ರಶೇಖರ್ ಎಂಬುವರ ಮನೆಯ ಹಿಂಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಅಲ್ಮೇರಾದಲ್ಲಿ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದಾರೆ.
ಈ ಸಂಬಂಧ ಸರಸ್ವತಿಪುರಂ ಠಾಣೆ ಪೆÇಲೀಸರಿಗೆ ದೂರು ನೀಡಲಾಗಿದ್ದು, ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.