ಮೈಸೂರು, ಜು.17- ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬರುವ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್‍ಗಾಗಿ ಪೆÇಲೀಸರನ್ನು ನಿಯೋಜಿಸಲಾಗಿದೆ. ಇದೇ 20, 27, ಆ.3 ಹಾಗೂ 10ರಂದು ಆಷಾಢ ಶುಕ್ರವಾರವಾಗಿದ್ದು, ಈ ದಿನಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ವಾಹನಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೆÇಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದ್ದು, ಲಲಿತ್‍ಮಹಲ್ ಹೆಲಿಪ್ಯಾಡ್‍ನಿಂದ ಚಾಮುಂಡಿ ಬೆಟ್ಟಕ್ಕೆ ವ್ಯವಸ್ಥೆಗೊಳಿಸಲಾಗಿರುವ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಭಕ್ತರು ಬೆಟ್ಟಕ್ಕೆ ತೆರಳಬೇಕೆಂದು ಸೂಚಿಸಿದ್ದಾರೆ. ಸಾರ್ವಜನಿಕರ ವಾಹನಗಳನ್ನು ಹೆಲಿಪ್ಯಾಡ್‍ನಲ್ಲಿ ನಿಲ್ಲಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕರಿಗೆ ಪ್ರಸಾದ ವಿತರಿಸುವವರು ಪಾಲಿಕೆಯಿಂದ ಅನುಮತಿ ಪಡೆಯಲಾಗಿದೆ. ಇದೇ ದಿನದಂದು ಕರ್ತವ್ಯ ನಿರ್ವಹಿಸುವವರಿಗೆ ಹಾಗೂ ಪೆÇಲೀಸ್ ಆಯುಕ್ತರಿಂದ ಪಾಸ್ ಪಡೆದವರು ಮಾತ್ರ ವಾಹನಗಳಲ್ಲಿ ತೆರಳಬೇಕಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಾದ್ವಾರದ ಪ್ರತಿಮೆ ಬಳಿಯಿಂದ ಮುಂದಕ್ಕೆ ಯಾವುದೇ ವಾಹನಗಳಿಗೂ ಪ್ರವೇಶ ಇರುವುದಿಲ್ಲ . ಚಾಮುಂಡಿ ಬೆಟ್ಟದಲ್ಲಿ ವಾಸಿಸುವವರು ವಾಹನಗಳಲ್ಲಿ ಸಂಚರಿಸಲು ಗ್ರಾಪಂ ಕಚೇರಿಯಿಂದ ಪಾಸ್ ಪಡೆದಿರಬೇಕು. ಹಾಗೆಯೇ ಆಷಾಢ ಶುಕ್ರವಾರದ ಹಿಂದಿನ ದಿನವಾದ ಗುರುವಾರ ರಾತ್ರಿಯಿಂದ ಚಾಮುಂಡಿ ಬೆಟ್ಟಕ್ಕೆ ವಾಹನಗಳನ್ನು ನಿಷೇಧಿಸಲಾಗಿದೆ. ಶುಕ್ರವಾರ ಮುಂಜಾನೆ 2 ಗಂಟೆಯಿಂದ ರಾತ್ರಿ 10ರವರೆಗೆ ಉಚಿತ ಬಸ್ ವ್ಯವಸ್ಥೆ ಇರುವುದಾಗಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.