7ಕೆಜಿ ಅಕ್ಕಿ 5 ಕೆಜಿಗೆ ಇಳಿಸುವ ಬಗ್ಗೆ ಚರ್ಚೆಯಾಗಿಲ್ಲ: ಸಚಿವ ಜಮೀರ್ ಅಹಮ್ಮದ್ ಖಾನ್

 

ಬೆಂಗಳೂರು, ಜು.17-ಪಡಿತರ ಚೀಟಿದಾರರಿಗೆ ತಲಾ ಏಳು ಕೆಜಿ ಅಕ್ಕಿ ನೀಡುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ವಿಧಾನಸಭೆಯಲ್ಲೇ ಉತ್ತರ ನೀಡಿದ್ದು, ತಲಾ 7ಕೆಜಿಯಿಂದ 5 ಕೆಜಿಗೆ ಇಳಿಸುವ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವ್ಯಕ್ತಿಗೆ ನೀಡುವ ಏಳು ಕೆಜಿ ಅಕ್ಕಿಯನ್ನು ಐದು ಕೆಜಿಗೆ ಇಳಿಸುವ ಬಗ್ಗೆ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಬಜೆಟ್ ಮಂಡನೆಯಾದ ನಂತರ ಬಡವರಿಗೆ ನೀಡುವ ಅಕ್ಕಿ ಪ್ರಮಾಣವನ್ನು ಕಡಿಮೆ ಮಾಡದೆ ಮುಂದುವರೆಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು ಎಂದರು.
ಅಮಾನತು:
ನಂಜನಗೂಡಿನ ಗೋದಾಮಿನಲ್ಲಿ 1165 ಕ್ವಿಂಟಾಲ್ ಅಕ್ಕಿ, 36 ಕ್ವಿಂಟಾಲ್ ತೊಗರಿ ಬೇಳೆ ಸೇರಿದಂತೆ 36.98 ಲಕ್ಷ ರೂ. ಮೌಲ್ಯದ ಪಡಿತರ ಕಳ್ಳತನವಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಆಹಾರ ಇಲಾಖೆಯ ಉಪ ನಿರ್ದೇಶಕ ರಾಮೇಶ್ವರಪ್ಪ ಎಂಬುವರನ್ನು ಅಮಾನತು ಮಾಡಲಾಗಿದೆ. ಡಿಪೆÇೀ ಮ್ಯಾನೇಜರ್ ಮೈಲಾರಿ, ಕಂಪ್ಯೂಟರ್ ಆಪರೇಟರ್ ಬಸವರಾಜು ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಗೋದಾಮಿನಲ್ಲಿ ಆಹಾರ ಪದಾರ್ಥಗಳು ಹಾಳುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸದ್ಯದಲ್ಲೇ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ