ತುಮಕೂರು, ಜು.18- ಖಾಸಗಿ ಕಾಲೇಜಿನ ಗುಮಾಸ್ತನೋರ್ವ ಲಾಡ್ಜ್ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಿರಾ ತಾಲೂಕಿನ ಕಡವಿಗೆರೆ ಗ್ರಾಮದ ನಿವಾಸಿ ನರಸಿಂಹಮೂರ್ತಿ (30) ಆತ್ಮಹತ್ಯೆ ಮಾಡಿಕೊಂಡವರು. ಇವರು ತುಮಕೂರು ವಿದ್ಯಾನಿಧಿ ಕಾಲೇಜಿನ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದರು.
ನಿನ್ನೆ ಮಧ್ಯಾಹ್ನ ತುಮಕೂರು ಖಾಸಗಿ ಬಸ್ ನಿಲ್ದಾಣದ ಸಮೀಪ ಇರುವ ಆದರ್ಶ ಲಾಡ್ಜ್ನಲ್ಲಿ ಕೊಠಡಿ ಬಾಡಿಗೆಗೆ ಪಡೆದು ಅಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಹೋಟೆಲ್ ಸಿಬ್ಬಂದಿ, ಕೊಠಡಿಯ ಬಾಗಿಲು ಬಡಿದಾಗ ಎಷ್ಟು ಹೊತ್ತಾದರೂ ಬಾಗಿಲು ತೆಗೆದಿರಲಿಲ್ಲ. ಬಳಿಕ ಕೊಠಡಿಯ ಕಿಟಕಿ ತೆಗೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ಸಿಬ್ಬಂದಿ ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ನಗರ ಠಾಣೆ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಹಾಗೂ ವೃತ್ತ ನಿರೀಕ್ಷಕ ಚಂದ್ರಶೇಖರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ, ತನಿಖೆ ಕೈಗೊಂಡಿದ್ದಾರೆ.