2014–16ರ ಅವಧಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಅತ್ಯಾಚಾರ ಪ್ರಕರಣ ದಾಖಲು

ನವದೆಹಲಿ:ಜು-19: 2014–16ರ ಅವಧಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ ಎಂದು ಕೇಂದ್ರ ಸಚಿವ ಕಿರೆನ್ ರಿಜಿಜು ಮಾಹಿತಿ ನೀಡಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, 2016ರಲ್ಲಿ 38,947, 2015ರಲ್ಲಿ 34,651, 2014ರಲ್ಲಿ 36,735 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ.

ಇನ್ನು ಮಹಿಳೆಯರ ವಿರುದ್ಧ 2016ರಲ್ಲಿ 3,38,954, 2015ರಲ್ಲಿ 3,29,243, 2014ರಲ್ಲಿ 3,39,457 ಅಪರಾಧ ಪ್ರಕರಣಗಳು ದಾಖಲಾಗಿದೆ ಎಂದು ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
1,10,333 cases of rape in India, between 2014-16, Kiren Rijiju,Parliament

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ