ಹುಬ್ಬಳ್ಳಿ- ಉಡುಪಿಯ ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ಅವರಿಗೆ ವಿಷ ಪ್ರಾಷಾಣ ಮಾಡಿದ್ದಾರೆ ಎಂಬ ಮಾತಲ್ಲಿ ಅರ್ಥವುಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಸಿದ ಅವರು, ಅವರು ಎಲ್ಲಿ ಆಹಾರ ಸ್ವೀಕಾರ ಮಾಡಿದ್ದಾರೋ ಏನೋ ಗೊತ್ತಿಲ್ಲ. ಲಿವರ್, ಕಿಡ್ನಿ ಫೇಲ್ ಆಗಿತ್ತು ಎಂದು ಮಾಹಿತಿ ಬಂದಿದೆ.
ಅವರಿಗೆ ವಿಷ ಪ್ರಷಾಣ ಯಾರು ಮಾಡ್ತಾರೆ…..? ಶಿರೂರು ಸ್ವಾಮೀಜಿಗಳಿಗೆ ವಿಷ ನಿಡೋ ಪ್ರಮೇಯವೇ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಸ್ವಾಮಿಗಳನ್ನ ಯಾರು ಕೊಲೆ ಮಾಡುವುದಿಲ್ಲ. ಅವರನ್ನು ಕೊಲೆ ಮಾಡಿ ಪಟ್ಟಕ್ಕೆ ಏರುವ ಉದ್ದೇಶ ಯಾರಿಗೂ ಇಲ್ಲ. ಕಾರಣ ಇಲ್ಲದೆ ಯಾರಮೇಲು ಆರೋಪ ಮಾಡಬಾರದು. ಅವರದು ಕೊಲೆ ಎಂಬುದು ಸುದ್ದ ಸುಳ್ಳು. ಅವರದು ಒಂದು ಸಹಜ ಸಾವು. ಅವರ ಸಾವಿನ ಹಿಂದೆ ಸಂಶಯ ಮಾಡುವುದು ಸರಿಯಲ್ಲಾ ಎಂದಿದ್ದಾರೆ. ಅವರು ಕಳೆದ ಒಂದು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದರು, ಇಂದು ರಾತ್ರಿ ಉಡುಪಿಗೆ ಹೋಗುತ್ತೇನೆ, ಅಲ್ಲೇ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸುವ ಕುರಿತು ತೀರ್ಮಾನಿಸುತ್ತೇನೆ. ಶಿರೂರು ಮಠದ ಭಕ್ತರಿಂದ ನನಗೆ ಯಾವುದೇ ಫೋನ್ ಕರೆ ಬಂದಿಲ್ಲ. ಸೋದಿ ಮಠದವರು ಉತ್ತರಾಧಿಕಾರಿ ನೇಮಕ ಮಾಡುತ್ತಾರೆ. ಸಲಹೆ ಕೇಳಿದ್ರೆ ಹೇಳುತ್ತೇನೆ. ಫುಡ್ ಪಾಯ್ಸನ್ ಆಗಿದೆ ಎಂದು ಅವರ ಅಣ್ಣ ನನಗೆ ಫೋನ್ ಮಾಡಿ ಹೇಳಿದ್ರು. ಪಟ್ಟದ್ದೇವರ ವಿಷಯಕ್ಕೂ ಇದಕ್ಕೂ ಸಂಬಂಧವಿಲ್ಲ. ನಮಗೂ ಶಿರೂರು ಶ್ರೀಗಳ ಜೊತೆಗೂ ಸಂಪರ್ಕ ಇರಲಿಲ್ಲ. ಅವರ ಕೆಲವು ಹೇಳಿಕೆಗಳ ಬಗ್ಗೆ ನಮಗೆ ಭಿನ್ನಾಭಿಪ್ರಾಯವಿತ್ತು.
ವೈಯಕ್ತಿಕವಾಗಿ ನನಗೆ ಪ್ರೀತಿ ವಿಶ್ವಾಸವಿತ್ತು ಎಂದರು.