
ನವದೆಹಲಿ, ಜು.19=ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ವಿರುದ್ಧ ಶಿವಸೇನೆ ಮತ ಚಲಾಯಿಸಲಿದೆ ಎಂಬ ವಿಶ್ವಾಸವನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ವ್ಯಕ್ತಪಡಿಸಿದ್ದಾರೆ.
ಎನ್ಡಿಎ ಮಿತ್ರಪಕ್ಷಗಳೆಲ್ಲವೂ ಒಗ್ಗಟ್ಟಾಗಿವೆ. ವಿರೋಧಪಕ್ಷಗಳು ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯದ ವಿರುದ್ದ ಮತ ಚಲಾಯಿಸಲಿವೆ. ಸಂಸತ್ತಿನಲ್ಲಿ ಬಹುಮತ ಹೊಂದಿರುವುದರಿಂದ ಈ ಗೊತ್ತುವಳಿಗೆ ಸೋಲಾಗಿದೆ ಎಂದು ಅನಂತಕುಮಾರ್ ಪುನರುಚ್ಚರಿಸಿದ್ದಾರೆ.
ಆದರೆ, ಈ ಬಗ್ಗೆ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಈ ಬಗ್ಗೆ ಇನ್ನೂ ಅಂತಿಮ ನಿಲುವು ತಿಳಿಸಿಲ್ಲ.
ಇದೇ ವೇಳೆ ಡಿಎಂಕೆ ಈ ಗೊತ್ತುವಳಿಗೆ ಬೆಂಬಲ ನೀಡುವುದಾಗಿ ಪ್ರಕಟಿಸಿದ್ದರೆ, ಎಐಎಡಿಂಕೆ ಇದರ ವಿರುದ್ಧ ಮತ ಚಲಾಯಿಸುವುದಾಗಿ ತಿಳಿಸಿದೆ. ನಾಳೆ ಲೋಕಸಭೆಯಲ್ಲಿ ಕೇಂದ್ರದ ವಿರುದ್ಧ ಟಿಡಿಪಿ ಮಂಡಿಸಿರುವ ಅವಿಶ್ವಾಸ ನಿರ್ಣಯ ಚರ್ಚೆಗೆ ಬರಲಿದೆ.