ಅಧಿಕಾರಿಗಳ ಪ್ರಾಮಾಣಿಕತೆಯಿಂದ ಜನತೆಗೆ ಸೌಲಭ್ಯ ತಲುಪಿಸಲು ಸಾಧ್ಯ

ಯಲಹಂಕ: ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ಮಾತ್ರ ಜನ ಸಾಮಾನ್ಯರಿಗೆ ಸರ್ಕಾರಿಸೌಲಭ್ಯಗಳು ಸರಳವಾಗಿ ತಲುಪುತ್ತವೆ ಎಂದು ವಿಧಾನಪರಿಷತ್ ಸದಸ್ಯ ಎಂ, ನಾರಾಯಣಸ್ವಾಮಿ ತಿಳಿಸಿದರು
ಬೆಂಗಳೂರು ಉತ್ತರ ತಾಲ್ಲೂಕಿನ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿವತಿಯಿಂದ ಆಯೋಜಿಸಿದ್ದ 2018-19ನೇಸಾಲಿನ ಮೊದಲನೆ ಸುತ್ತಿನ ಗ್ರಾಮಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ

ಜನಪ್ರತಿನಿಧಿಗಳಿಗೆ ಕೇವಲ ಐದು ವರ್ಷವಷ್ಟೇ ಅಧಿಕಾರದಲ್ಲಿರುತ್ತಾರೆ ಆದರೆ ಅಧಿಕಾರಿಗಳ ಕರ್ತವ್ಯದ ಅವಧಿ ಅರವತ್ತು ವರುಷ ಇರುತ್ತದೆ ಆದ್ದರಿಂದ ಸಂಬಂದಪಟ್ಟ ಇಲಾಖೆ ಅಧಿಕಾರಿಗಳು ಕಛೇರಿಗಳಿಗೆ ಬಂದ ಪುಟ್ಟ ಹೋದ ಪುಟ್ಟ ಎನ್ನದೆ ಸರ್ಕಾರಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪುವ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು ಕಳೆದ ವರ್ಷಕ್ಕಿಂತ ಈ ವರ್ಷದಲ್ಲಿ ಗ್ರಾಮ ಪಂಚಾಯಿತಿಗೆ ಆದಾಯ ಪ್ರಮಾಣ ಕಡಿಮೆ ಇರುವುದನ್ನು ಪರಿಶೀಲಿಸಿ ಪಂಚಾಯಿತಿಗೆ ಆದಾಯ ಪ್ರಮಾಣ ಹೆಚ್ಚಿಸಲು ಪಂಚಾಯಿತಿ ಅಭಿವೃದ್ಧಿಅಧಿಕಾರಿ ಶ್ರಮವಹಿಸಬೇಕು ಇಲ್ಲದೆ ಹೋದಲ್ಲಿ ವರ್ಷ ದಿಂದ ವರ್ಷಕ್ಕೆ ಮೂಲಭೂತ ಸೌಕರ್ಯಗಳನ್ನು ತಲುಪಿಸಲು ಸಾಧ್ಯವಾಗುವುದಿಲ್ಲ ಗ್ರಾಮಸಭೆಗೆ ಕೆಲ ಇಲಾಖೆ ಅಧಿಕಾರಿಗಳು ಆಗಮಿಸದಿರುವುದನ್ನು ಕಂಡು ಅವರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ತಿಳಿಸಿದರು
ನಂತರ ಜಿಲ್ಲ್ಲಾಪಂಚಾಯಿತಿ ಸದಸ್ಯೆ ಲಾವಣ್ಯ ನರಸಿಂಹಮೂರ್ತಿ ಮಾತನಾಡಿ ಪ್ರಕೃತಿ ಮುನಿದರೆ ನಾವೇಲ್ಲ ತೃಣಮಾತ್ರ ಅಷ್ಟೇ ಆದ್ದರಿಂದ ನಮ್ಮ ಪರಿಸರದಲ್ಲಿ ಸಿಗುವ ಗಾಳಿ ನೀರು ಆಹಾರ ಪದಾರ್ಥಗಳನ್ನು ಅನವಶ್ಯಕವಾಗಿ ಹಾಳು ಮಾಡದಿರಿ ಮುಂದಿನ ಪೀಳಿಗೆಗೆ ಪ್ರಕೃತಿ ಸಂಪತ್ತನ್ನು ಉಳಿಸೋಣ ಆದ್ದರಿಂದ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಲ್ಲಿ ಮಳೆ ನೀರು ಕೊಯ್ಲು ಪದ್ದತಿ ಅಳವಡಿಸಿಕೊಳ್ಳಿ ಮಳೆ ನೀರನ್ನು ಸಂಗ್ರಹಿಸಿ ಬಳಸಿ ಹಾಗೆ ನಿಮ್ಮ ಜಮೀನುಗಳ ಬಳಿ ಚೆಕ್ ಡ್ಯಾಂಗಳನ್ನು ನಿರ್ಮಿಸಿ ಅಂತರ್ಜಲ ವೃದ್ಧಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು ಹಾಗೆ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ ಎಂದರು
ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಮ್ಮ ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರುಗಳು ಪಿಡಿಓ ದಾಮೋಧರ ಕಾರ್ಯದರ್ಶಿ ಎಸ್.ಡಿ ರಂಗಸ್ವಾಮಿ,ಹಾಜರಿದ್ದರು ಹಾಗೂ ಕಂದಾಯ ಇಲಾಖೆ, ಆಹಾರ ಇಲಾಖೆ ಅಧಿಕಾರಿಗಳು ತೋಟಗಾರಿಕ ಇಲಾಖೆ ಅಧಿಕಾರಿ ಸಮಾಜಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭಾಗವಹಿಸಿ ಆಯಾ ಇಲಾಖೆಗಳಿಂದ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮನವರಿಕೆ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ