ಕಿರವತ್ತಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಮೇಲೆ ಎಸಿಬಿ ದಾಳಿ

Varta Mitra News

ಬೆಂಗಳೂರು, ಜು.20- ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಇಂದು ಬೆಳಗ್ಗೆ ಯಲ್ಲಾಪುರದ ಕಿರವತ್ತಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಅಂಕೋಲಾ ತಾಲೂಕಿನ ಬೇಲಿಕೆರೆ ಹೋಬಳಿಯ ಸಕಲಬೇಣ ಗ್ರಾಮದಲ್ಲಿರುವ ಮನೆ, ಕಾರವಾರ ತಾಲೂಕಿನ ಬಾಡಾ ಗ್ರಾಮದಲ್ಲಿರುವ ಮನೆ, ಮಾಜಾಳಿ, ಕೋಠಾರ ಗ್ರಾಮದ ನಿವಾಸ ಹಾಗೂ ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮದಲ್ಲಿರುವ ಕಚೇರಿ ಮೇಲೆ ದಾಳಿ ಮಾಡಿ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದರು.

ACB Raid,kiravatti,Forestry Office

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ