ಸೆ.6ಕ್ಕೆ ಭಾರತ ಮತ್ತು ಅಮೆರಿಕ ನಡುವಣ 2+2 ಮಾತುಕತೆ

ನವದೆಹಲಿ:ಜು-20: ಭಾರತ ಮತ್ತು ಅಮೆರಿಕ ನಡುವಣ ಬಹು ನಿರೀಕ್ಷಿತ 2+2 ಮಾತುಕತೆ ಸೆಪ್ಟೆಂಬರ್ 6ರಂದು ನವದೆಹಲಿಯಲ್ಲಿ ನಡೆಯಲಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅಮೆರಿಕ ವಿದೇಶಾಂಗ ವ್ಯವಹಾರಗಳ ಇಲಾಖೆ, ಸೆಪ್ಟೆಂಬರ್‌ ಮೊದಲ ವಾರದಲ್ಲಿ ಅಮೆರಿಕ ಮತ್ತು ಭಾರತ ನಡುವಣ 2+2 ಮಾತುಕತೆಯನ್ನು ನವದೆಹಲಿಯಲ್ಲಿ ನಡೆಸಲಾಗುವುದು ಎಂದು ಘೋಷಿಸಿದೆ.

ಈ ಉನ್ನತ ಮಟ್ಟದ ಸಭೆಯಲ್ಲಿ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕೆಲ್‌ ಪಾಂಪಿಯೋ ಮತ್ತು ರಕ್ಷಣಾ ಕಾರ್ಯದರ್ಶಿ ಜೇಮ್ಸ್‌ ಮಟ್ಟಿಸ್‌ ಭಾಗವಹಿಸಲಿದ್ದಾರೆ. ಎರಡು ರಾಷ್ಟ್ರಗಳು ಕಾರ್ಯತಂತ್ರ, ಭದ್ರತೆ ಮತ್ತು ರಕ್ಷಣಾ ಕ್ಷೇತ್ರವನ್ನು ಬಲಪಡಿಸುವ ಕುರಿತು ಚರ್ಚಿಸಲಿವೆ.

ಭಾರತ ಮತ್ತು ಅಮೆರಿಕ ಜಂಟಿಯಾಗಿ ಇಂಡೋ-ಪೆಸಿಫಿಕ್ ಪ್ರದೇಶದ ಸವಾಲುಗಳ ಕುರಿತು ಚರ್ಚಿಸಲಿದ್ದು, ಈ ಸಂವಾದವನ್ನು ಏರ್ಪಡಿಸುವ ಕುರಿತು 2017ರ ಜೂನ್‌ 25, 26ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ಎರಡು ರಾಷ್ಟ್ರಗಳ ನಡುವೆ ಒಪ್ಪಂದವಾಗಿತ್ತು.

2 + 2 ಸಭೆಯು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ಷೇರುಗಳ ಹಂಚಿಕೆ ಕುರಿತಾದ ಆಸಕ್ತಿ ಜತೆಗೆ ಎರಡು ರಾಷ್ಟ್ರಗಳ ನಡುವಿನ ಭದ್ರತೆ ಸಂಬಂಧಗಳನ್ನು ಬಲಪಡಿಸುವ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

First High-Level ‘2+2 Dialogue, India-US,ON September 6th

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ