
ಬೆಂಗಳೂರು, ಜು.20- ಕಬಿನಿ ಹಾಗೂ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಮಧ್ಯಾಹ್ನ ಬಾಗಿನ ಅರ್ಪಿಸಿದರು.
ನಿನ್ನೆ ಸಂಜೆ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿಗಳು, ಇಂದು ಈ ಎರಡೂ ಜಲಾಶಯಗಳಿಗೆ ಬಾಗಿನ ಅರ್ಪಿಸಿದರು.
ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಕಬಿನಿ, ಹಾರಂಗಿ ಹಾಗೂ ಕೆಆರ್ಎಸ್ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದವು. ದಂಪತಿ ಸಹಿತವಾಗಿ ಕಬಿನಿ ಮತ್ತು ಕೆಆರ್ಎಸ್ ಜಲಾಶಯಗಳಿಗೆ ಕುಮಾರಸ್ವಾಮಿ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ಮೈಸೂರು, ಮಂಡ್ಯ ಜಿಲ್ಲೆಯ ಸಚಿವರು ಹಾಗೂ ಶಾಸಕರು ಹಾಜರಿದ್ದರು. ಇದಕ್ಕೂ ಮುನ್ನ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಸಲ್ಲಿಸಿದರು.
CM H D Kumaraswamy,KRS,Kabini,Bagina