ಸಂಸತ್‌ ಕಲಾಪದಲ್ಲಿ ಎಚ್ ಡಿಕೆ ಕಣ್ಣೀರು, ಜನಾರ್ದನ ರೆಡ್ಡಿ ವಿಚಾರ ಪ್ರಸ್ತಾಪ

ಹೊಸದಿಲ್ಲಿ : ಸಂಸತ್ತಿನಲ್ಲಿ ಶುಕ್ರವಾರ ವಿಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ಸಮರ ನಡೆಯುದಿದೆ. ಈ ವೇಳೆ ಜಾನಾರ್ದನ ರೆಡ್ಡಿ ಮತ್ತು ಕುಮಾರ ಸ್ವಾಮಿ ಕಣ್ಣೀರ ವಿಷಯವೂ ಪಸ್ತಾಪವಾಗಿದೆ.
ಟಿಡಿಪಿ ಸಂಸದ ಗಲ್ಲಾ ಜಯದೇವ್‌ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನೀವು ಭ್ರಷ್ಟರ ರಕ್ಷಣೆಗೆ ನಿಂತಿದ್ದೀರಿ. ಕರ್ನಾಟಕ ಮತ್ತು ಆಂಧ್ರದಲ್ಲಿ ಅಕ್ರಮ ಗಣಿಗಾರಿಕೆಯ ಎ1 , ಎ2 ಆರೋಪಿಯಾಗಿರುವ ಜನಾರ್ದನ ರೆಡ್ಡಿಯ ಮೇಲಿರುವ ಪ್ರಕರಣಗಳನ್ನು ಕೈಬಿಟ್ಟಿದ್ದೀರಿ , ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರ ಬೆಂಬಲಿಗರಿಗೆ ಟಿಕೆಟ್‌ಗಳನ್ನೂ ನೀಡಿದ್ದೀರಿ , ಯಾಕೆ ಅವರಿಗೆ ಬೆಂಬಲ ನೀಡಿದ್ದೀರಿ ಎಂದು ಪ್ರಶ್ನಿಸಿದರು.
ಏತನ್ಮಧ್ಯೆ, ಮಧ್ಯಪ್ರದೇಶದ ಬಿಜೆಪಿ ಸಂಸದ ರಾಕೇಶ್‌ ಸಿಂಗ್‌ ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡುವ ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕಣ್ಣೀರು ಹಾಕಿರುವ ವಿಚಾರವನ್ನೂ ಪ್ರಸ್ತಾವಿಸಿದರು. ಕುಮಾರಸ್ವಾಮಿ ಅವರು ಕಣ್ಣೀರು ಹಾಕಿರುವುದನ್ನು ಇಡೀ ದೇಶವೇ ನೋಡಿದೆ. ಒಂದು ಕುಟುಂಬದ ಸರ್ಕಾರಕ್ಕೆ ಮಾತ್ರ ಕಾಂಗ್ರೆಸ್‌ ಬೆಂಬಲ ನೀಡುತ್ತದೆ.ಕಾಂಗ್ರೆಸ್‌ ಜೊತೆ ಇನ್ನೆಷ್ಟು ಪಕ್ಷಗಳು ವಿಷ ಕುಡಿಯಬೇಕು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ