ನವದೆಹಲಿ:ಜು-೧೯:ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಭಾಷಣದ ಬಳಿಕ ಕಲಾಪದಲ್ಲಿಯೇ ಮೋದಿಯವರ ಬಳಿ ಬಂದು ಹಸ್ತಲಾಘವ ಮಾಡಿ ಆಲಂಗಿಸಿದ್ದು, ಗಮನಸೆಳೆಯಿತು.
ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿಯವರು ಗಂಭೀರ ಆರೋಪಗಳನ್ನು ಮಾಡಿದ್ದ ಹಿನ್ನಲೆಯಲ್ಲಿ ಬಿಜೆಪಿ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಸದನದಲ್ಲಿ ತೀವ್ರ ಗದ್ದಲ ಉಂಟಾದ ಹಿನ್ನಲೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಮಧ್ಯಾಹ್ನ 1.45ಕ್ಕೆ ಮುಂದೂಡಿದರು.
ಮತ್ತೆ ಕಲಾಪ ಆರಂಭವಾದ ಬಳಿಗ ತಮ್ಮ ಭಾಷಣವನ್ನು ಮುಂದುವರೆಸಿದ ರಾಹುಲ್ ಗಾಂಧಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ವಿಭಿನ್ನ ರಾಜಕಾರಣಿಗಳು. ನಮಗೆ ಅಧಿಕಾರ ಇಲ್ಲದಿದ್ದರೂ ಪರವಾಗಿಲ್ಲ. ಆದರೆ, ಮೋದಿ, ಶಾಗೆ ಅಧಿಕಾರ ಇಲ್ಲದಿದ್ದರೆ ಆಗುವುದಿಲ್ಲ ಎಂದು ಲೇವಡಿ ಮಾಡಿದರು.
ಇದೀಗ ಮೋದಿ ಹಾಗೂ ಶಾ ಅವರನ್ನು ಸೋಲಿಸಲು ನಾವು ವಿರೋಧ ಪಕ್ಷಗಳೆಲ್ಲಾ ಒಂದಾಗಿದ್ದೇವೆ. ನಾನು ನಿಮಗೆ ಪಪ್ಪು ಆಗಿರಬಹುದು. ಆದರೆ, ಕಾಂಗ್ರೆಸ್ ಪಕ್ಷ ದೇಶವನ್ನು ಕಟ್ಟಿದೆ. ನನ್ನಲ್ಲಿರುವ ಆಕ್ರೋಶ ಭಾವನೆಗಳು ಬಿಜೆಪಿ ಸದಸ್ಯರಲ್ಲೂ ಕೂಡ ಇದೆ. ನಾನು ಎಲ್ಲರನ್ನೂ ಕಾಂಗ್ರೆಸ್ಸಿಗರನ್ನಾಗಿ ಬದಲಾಯಿಸುತ್ತೇನೆಂದು ಹೇಳಿದರು.
ಸುದೀರ್ಘೆ ವಾಗ್ದಾಳಿ ಬಳಿಕ ಪ್ರಧಾನಿ ಮೋದಿಯವರು ಕುಳಿತಿರುವ ಸ್ಥಳಕ್ಕೆ ಬಂದ ರಾಹುಲ್ ಅವರು, ಹಸ್ತಲಾಘವ ನೀಡಿ, ಆಲಂಗಿಸಿ ಮತ್ತೆ ತಾವಿದ್ದ ಸ್ಥಳಕ್ಕೆ ತೆರಳಿದರು. ಈ ವೇಳೆ ನಾನು ಹಿಂದೂ, ನೀವು ಎಷ್ಟೇ ದೂರ ತಳ್ಳಿದರೂ ಹತ್ತಿರ ಮಾಡಿಕೊಳ್ಳುತ್ತೇನೆಂದರು.
Parliament,Rahul Gandhi,PM Modi,Hug