ಉಚಿತ ಪಾಸ್ ವಿತರಣೆಗೆ ಆಗ್ರಹ


ಹುಬ್ಬಳ್ಳಿ- ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಕುರಿತು ಪ್ರಸ್ತುತ ಮೈತ್ರಿ ಸರ್ಕಾರ ಮಾಡುತ್ತಿರುವ ತಾರತಮ್ಯವನ್ನು ಖಂಡಿಸಿ ಎಐಡಿಎಸ್ಓ, ಎಐಡಿವಾಯ್ಓ, ಎಐಎಂಎಸ್ಎಸ್ ಹಾಗೂ ಆಲ್ ಇಂಡಿಯಾ ಮಹಿಳಾ ಸಂಸ್ಕೃತಿಕ ಸಂಘಟನೆ ವತಿಯಿಂದ ಇಂದು ನಗರದ ಮಿನಿವಿಧಾನಸೌದದ ಎದುರು ಪ್ರತಿಭಟನೆ ನಡೆಸಿದರು.
ಸತತ ನಾಲ್ಕು ವರ್ಷಗಳಿಂದ ಬರಗಾಲ, ಬೆಲೆ ಏರಿಕೆ ನೋಟ ರದ್ದತಿಯಿಂದಾಗಿ ಗ್ರಾಮೀಣ ಹಾಗೂ ಬಡ ಜನತೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅಲ್ಲದೇ ಸಾವಿರಾರೂ ರೂಪಾಯಿ ಹಣ ಕೊಟ್ಟು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಕೊಡಿಸಲು ಪಾಲಕರಿಗೆ ಕಷ್ಟವಾಗುತ್ತಿದೆ. ಹಿಂದಿನ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ ಘೋಷಣೆ ಮಾಡಿರುವುದನ್ನು ಪ್ರಸ್ತುತ ಮೈತ್ರಿ ಸರ್ಕಾರ ಕಡೆಗಣಿಸಿರುವುದು ಸರಿಯಲ್ಲ. ಮತ್ತೊಂದೆಡೆ ಉಚಿತ ಬಸ್ ಪಾಸ್ ವಿತರಣೆ ಕುರಿತು ಸಂಭಂದಿಸಿದ ಅಧಿಕಾರಿಗಳು ಆಶ್ವಾಸನೆ ನೀಡುತ್ತಿದ್ದಾರೆ. ರೈತಪರ ಸರ್ಕಾರ ಎಂದು ಹೇಳುವ ಸರ್ಕಾರ ರೈತ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ. ಉಚಿತ ಬಸ್ ಪಾಸ್ ಜಾರಿಗೊಳಿಸಲು ಸಾರಿಗೆ ಇಲಾಖೆ ಹಾಗೂ ರಾಜ್ಯ ಸರ್ಕಾರವು ಆರ್ಥಿಕ ಹೊರೆಯಾಗುತ್ತದೆ ಎಂದು ಸುಳ್ಳು ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ