ನೇಣಿಗೆ ಶರಣಾದ ವ್ಯಕ್ತಿ

high contrast image of a hangman's noose

ಮೈಸೂರು, ಜು.21- ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಜನತಾ ನಗರದ 7ನೇ ಕ್ರಾಸ್ ವಾಸಿ ಮಹೇಂದ್ರ (35) ಸಾವಿಗೆ ಶರಣಾದ ವ್ಯಕ್ತಿ. ಅರವಿಂದನಗರದಲ್ಲಿರುವ ಕೆಎಸ್‍ಆರ್‍ಟಿಸಿ ಡಿಪೆÇೀದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು, ಕಳೆದ 2-3 ವಾರಗಳಿಂದ ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು.
ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯವರು ಹಲವಾರು ಬಾರಿ ದೂರವಾಣಿ ಕರೆ ಮಾಡಿದರೂ ಇವರು ಫೆÇೀನ್ ತೆಗೆಯದ ಕಾರಣ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದ. ಆದರೆ, ಈತನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸರಸ್ವತಿಪುರಂ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ