
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಕಾಳಗ ಶುರುವಾಗಿದೆ. ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಅಪಹರಿಸಿ ಹತ್ಯೆಗೈದ ಬೆನ್ನಲ್ಲೆ ಸೇನೆ, ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದಿದೆ. ನಿನ್ನೆ ತರಬೇತಿ ನಿರತ ಪೇದೆ ಸಲೀಂ ಅಹ್ಮದ್ ಶಾ ಎಂಬುವರನ್ನು ಭಯೋತ್ಪಾದಕರು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು.
ಪೇದೆಯ ಹತ್ಯೆ ಮರುದಿನ ಇಂದು ಭದ್ರತಾ ಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿವೆ. ಇಂದು ಬೆಳಗ್ಗೆ ನಡೆದ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಸ್ಥಳದಲ್ಲಿ ಇನ್ನೂ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ