
ಬಾಗಲಕೋಟೆ, ಜು.22- ಸತತವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಮನೆಯವರು ಅಪಾಯದಿಂದ ಪಾರಾಗಿರುವ ಘಟನೆ ಜಮಖಂಡಿ ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಕಂಕನವಾಡಿಯಲ್ಲಿ ಈ ಘಟನೆ ನಡೆದಿದ್ದು, ಛಾವಣಿ ಕುಸಿತದಿಂದ ಮನೆಯಲ್ಲಿದ್ದ ದಿನಸಿ ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ. ಆದರೆ, ಯಾವುದೇ ಜೀವಾಪಾಯವಾಗಿಲ್ಲ.
ಮನೆಯವರಿಗೆ ಪರಿಹಾರ ನೀಡಬೇಕೆಂದು ತಾಲ್ಲೂಕು ಆಡಳಿತವನ್ನು ಸ್ಥಳೀಯರು ಆಗ್ರಹಿಸಿದ್ದಾರೆ.