ಕಾಬೂಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐಸಿಸ್ ಅಟ್ಟಹಾಸ: 14 ಜನರು ಬಲಿ

ಕಾಬೂಲ್ :ಜು-23: ಆಪ್ಘಾನ್ ರಾಜಧಾನಿ ಕಾಬೂಲ್ ನಲ್ಲಿ ಐಸಿಸ್ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಾಧ್ಯಕ್ಷ ಅಬ್ದುಲ್ ರಶೀದ್ ದೋಸ್ತಮ್ ಆಗಮನದ ನಂತರ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಬ್ದುಲ್ ರಶೀದ್ ದೋಸ್ತಮ್ ಸ್ವಾಗತಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ರಾಜಕೀಯ ನಾಯಕರು ಮತ್ತು ಅವರ ಬೆಂಬಲಿಗರು ಆಗಮಿಸಿದ್ದರು. ಈ ಸಂದರ್ಭದಲ್ಲಿ ದಾಳಿ ನಡೆದಿದೆ. ಮೊದಲ ಬಾರಿಗೆ ಇಂತಹ ದಾಳಿ ನೋಡುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪಾಶ್ಚಾತ್ಯ ಸೂಟ್ ಮತ್ತು ಶಸ್ತ್ರಸಜ್ಜಿತ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದೋಸ್ತಮ್ ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ ಎಂದು ವಕ್ತಾರ ಬಾಷಿರ್ ಅಹ್ಮದ್ ತಯಾಂಜ್ ತಿಳಿಸಿದ್ದಾರೆ.

ಘಟನೆಯಲ್ಲಿ 14 ಮಂದಿ ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 9 ಭದ್ರತಾ ಪಡೆ ಹಾಗೂ ಸಂಚಾರ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವಕ್ತಾರ ಹಸ್ಮತ್ ಸ್ಟಾನಿಕ್ ಜಾಯ್ ಹೇಳಿದ್ದಾರೆ.

ಐಸಿಸ್ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಅಫ್ಘಾನಿಸ್ತಾನದಲ್ಲಿ ಮಾನವ ಹಕ್ಕುಗಳ ದುರ್ಬಳಕೆ ಸಂಬಂಧಿಸಿದಂತೆ ಡೊಸ್ಟಮ್ ಮೇಲೆ ಆರೋಪ ಕೇಳಿಬಂದಿತ್ತು. 2017ರಿಂದಲೂ ಟರ್ಕಿಯಲ್ಲಿ ವಾಸಿಸುತ್ತಿದ್ದ ಅವರು ವಿಮಾನದ ಮೂಲಕ ಆಗಮಿಸುತ್ತಿದ್ದರು ಎನ್ನಲಾಗಿದೆ.

ಸರ್ಕಾರದ ಮೇಲೆ ನಂಬಿಕೆ ಇಲ್ಲ , ದೋಸ್ತಮ್ ವಿರುದ್ಧ ಪ್ರತಿಭಟನೆ ಮುಂದುವರೆಸುವುದಾಗಗಿ ಪ್ರತಿಭಟನಾಕಾರರು ಹೇಳಿಕೆ ನೀಡಿದ್ದಾರೆ.ಮುಂದಿನ ವರ್ಷದಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಉತ್ತರ ಮತ್ತು ಮಧ್ಯ ಉಜ್ಬೇಕ್ ಪ್ರಾಂತ್ಯದಲ್ಲಿ ಬೆಂಬಲ ಪಡೆಯುವ ನಿಟ್ಟಿನಲ್ಲಿ ಅಧ್ಯಕ್ಷ ಅಶ್ರಪ್ ಘನಿ ಅವರೇ ದೋಸ್ತಮ್ ಸ್ವದೇಶಕ್ಕೆ ವಾಪಾಸ್ ಆಗಲು ಗ್ರೀನ್ ಸಿಗ್ನಲ್ ನೀಡಿದ್ದರು ಎನ್ನಲಾಗಿದೆ.

Suicide bomber, kills 14, Kabul airport,Afghanistan

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ