ಜಂತರ್ ಮಂತರ್‍ನಲ್ಲಿ ಪ್ರತಿಭಟನೆ ನಿಲ್ಲಿಸಲು ಸಾಧ್ಯವಿಲ್ಲ – ಸುಪ್ರೀಂಕೋರ್ಟ್

ನವದೆಹಲಿ,ಜು.23- ಜಂತರ್ ಮಂತರ್ ನಲ್ಲಿ ಹಾಗೂ ಬೋಟ್ ಕ್ಲಬ್ ಆವರಣದಲ್ಲಿ ಪ್ರತಿಭಟನೆ ಹಾಗೂ ಧರಣಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಅರ್ಜುನ್ ಕುಮಾರ್ ಸಿಕ್ರಿ ಹಾಗೂ ಅಶೋಕ್ ಭೂಷಣ್ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ. ಜಂತರ್ ಮಂತರ್ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಪದೇ ಪದೇ ನಡೆಯುತ್ತಿರುವ ಧರಣಿ, ಪ್ರತಿಭಟನೆಗಳು ಪರಿಸರ ಕಾನೂನನ್ನು ಉಲ್ಲಂಘಿಸುತ್ತಿವೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪ್ರಶ್ನಿಸಿ ಸಾರ್ವಜನಿಕರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ,ಜಂತರ್ ಮಂತರ್ ದೆಹಲಿಯ ಕೇಂದ್ರ ಭಾಗದಲ್ಲಿದ್ದು, ಪ್ರತಿಭಟನೆ ನಡೆಸಲು ಅದೇ ಸೂಕ್ತ ಸ್ಥಳ, ಅಲ್ಲಿಯೇ ಅವಕಾಶ ಮಾಡಿಕೊಡಿ ಎಂದು ಹೇಳಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಸಂಪೂರ್ಣ ನಿಷೇಧಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ