ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ

ಮುಂಬೈ:ಜು-25: 2018ನೇ ಸಾಲಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟವಾಗಿದ್ದು, ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ ಕದನಕ್ಕೆ ಸೆಪ್ಟೆಂಬರ್ 19ರಂದು ಮುಹೂರ್ತ ಫಿಕ್ಸ್ ಆಗಿದೆ.

ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆಗೊಳಿಸಿದ್ದು, ಯುಎಇ ಆತಿಥ್ಯ ವಹಿಸುತ್ತಿರುವ 2018ರ ಏಷ್ಯಾ ಕಪ್‌ನಲ್ಲಿ ಹಾಲಿ ಚಾಂಪಿಯನ್ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಆಫ್ಘಾನಿಸ್ತಾನ ಸೇರಿದಂತೆ ಒಟ್ಟು ಆರು ತಂಡಗಳು ಭಾಗವಹಿಸುತ್ತಿದೆ.

ಆರು ತಂಡಗಳನ್ನು ಒಟ್ಟು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ‘ಎ’ ಗುಂಪಿನಲ್ಲಿ ಭಾರತ, ಪಾಕಿಸ್ತಾನ ಸೇರಿದಂತೆ ಕ್ವಾಲಿಫೈಯರ್ ತಂಡವೊಂದು ಇರಲಿದೆ. ಹಾಗೆಯೇ ‘ಬಿ’ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನ ತಂಡಗಳು ಸ್ಥಾನ ಗಿಟ್ಟಿಸಿಕೊಂಡಿದೆ.

ಇನ್ನು ಕ್ವಾಲಿಫೈಯರ್ ಹಂತದಲ್ಲಿ ಯುಎಇ, ಸಿಂಗಾಪುರ, ಒಮಾನ್, ನೇಪಾಳ, ಮಲೇಷ್ಯಾ ಹಾಗೂ ಹಾಂಕಾಂಗ್ ತಂಡಗಳು ಪೈಪೋಟಿ ನಡೆಸಲಿದ್ದು, ಈ ತಂಡಗಳ ಪೈಕಿ ಒಂದು ತಂಡ ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ.

ಸೆಪ್ಟೆಂಬರ್ 15ರಂದು 2018ರ ಏಷ್ಯಾ ಕಪ್‌ ಟೂರ್ನಿಗೆ ಚಾಲನೆ ದೊರಕಲಿದ್ದು, ಟೂರ್ನಿಯ ಉದ್ಘಾಟನಾ ಪಂದ್ಯ ದುಬೈನಲ್ಲಿ ನಡೆಯಲಿದ್ದು, ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗುತ್ತಿವೆ. ಇನ್ನು ದುಬೈನಲ್ಲಿ ಸೆಪ್ಟೆಂಬರ್ 28ರಂದು ಫೈನಲ್ ಪಂದ್ಯ ನಡೆಯಲಿದೆ. ಸೆಪ್ಟೆಂಬರ್ 18ರಂದು ಕ್ವಾಲಿಫೈಯರ್ ವಿರುದ್ಧ ಮೊದಲ ಪಂದ್ಯವನ್ನಾಡುವ ಭಾರತ ಸೆಪ್ಟೆಂಬರ್ 19ರಂದು ಸಾಂಪ್ರದಾಯಿಕ ವೈರಿ ಪಾಕಿಸ್ತಾನ ಸವಾಲನ್ನು ಎದುರಿಸಲಿದೆ.

Asia Cup 2018 Schedule,India vs Pakistan on 19 September in Dubai

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ