ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೀಸಲಾತಿ ನಿಗದಿ: ಹೈಕೋರ್ಟ್ ಆಕ್ಷೇಪ

ಬೆಂಗಳೂರು, ಜು.25-ನಗರದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೀಸಲಾತಿ ನಿಗದಿಗೊಳಿಸಿದ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಬಗ್ಗೆ ನ್ಯಾಯಾಲಯಕ್ಕೆ ಹಾಜರಾಗಿ ಮಾಹಿತಿ ನೀಡುವಂತೆ ಅಡ್ವೋಕೇಟ್ ಜನರಲ್ ಅವರಿಗೆ ಸೂಚನೆ ನೀಡಿದೆ.

ನಗರದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಈವರೆಗೆ ಮೀಸಲಾತಿ ನಿಗದಿಗೊಳಿಸಿಲ್ಲ ಎಂದು ದೂರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಉಚ್ಚ ನ್ಯಾಯಾಲಯ ಇಂದು ವಿಚಾರಣೆ ನಡೆಸಿತು.

ಸರ್ಕಾರವು ಈ ವಿಷಯದಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಈವರೆಗೂ ಸರ್ಕಾರ ಮೀಸಲಾತಿ ನೀಡಿಲ್ಲ ಎಂದು ಆಯೋಗದ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ವಿಭಾಗೀಯ ಪೀಠವೊಂದು ಇದೊಂದು ಗಂಭೀರ ವಿಷಯ. ಸರ್ಕಾರ ಈ ವಿಷಯದಲ್ಲಿ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅಡ್ವೋಕೇಟ್ ಜನರಲ್ ಅವರು ಕೋರ್ಟ್‍ಗೆ ಹಾಜರಾಗಿ ಈ ಬಗ್ಗೆ ಮಾಹಿತಿ ನೀಡಬೇಕೆಂದು ನ್ಯಾಯಾಲಯ ಸೂಚಿಸಿದೆ.

Reservation for local bodies polls: High Court objection

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ