ಪಾಟೀದಾರ್ ಮೀಸಲಾತಿ ಪ್ರತಿಭಟನೆ ವೇಳೆ ಗಲಭೆ: ಹಾರ್ಧಿಕ್ ಪಟೇಲ್ ಸೇರಿ ಮೂರಿಗೆ 2 ವರ್ಷ ಜೈಲು

ಅಹ್ಮದಾಬಾದ್:ಜು-25: 2015ರಲ್ಲಿ ನಡೆದ ಪಾಟೀದಾರ್ ಮೀಸಲಾತಿ ಪ್ರತಿಭಟನೆ ವೇಳೆ ನಡೆಸಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟೀದಾರ್ ಮೀಸಲಾತಿ ಹೋರಾಟ ಮುಖಂಡ ಹಾರ್ದಿಕ್ ಪಟೇಲ್ ದೋಷಿ ಎಂದು ತೀರ್ಪು ನೀಡಿರುವ ನ್ಯಾಯಾಲಯ, ಹಾರ್ದಿಕ್ ಪಟೇಲ್ ಗೆ 2 ವರ್ಷ ಜೈಲುಶಿಕ್ಷೆ ವಿಧಿಸಿದೆ.

ಪ್ರಕರಣ ಸಂಬಂಧ ಗುಜರಾತ್ ನ ವಿಸ್ ನಗರ್ ಕೋರ್ಟ್ ತೀರ್ಪು ನೀಡಿದ್ದು, ಹಾರ್ದಿಕ್ ಪಟೇಲ್ ಸೇರಿದಂತೆ ಮೂವರಿಗೆ 2 ವರ್ಷ ಜೈಲುಶಿಕ್ಷೆ ವಿಧಿಸಿ, ತಲಾ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

2015ರಲ್ಲಿ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಸಂಚಾಲಕ ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಸುಮಾರು 500 ಮಂದಿ ಪಟೇಲ್ ಸಮುದಾಯದವರು ವಿಸ್ ನಗರದಲ್ಲಿನ ಬಿಜೆಪಿ ಶಾಸಕರ ಕಚೇರಿಯನ್ನು ಧ್ವಂಸಗೊಳಿಸಿದ್ದರು. ಅಲ್ಲದೇ ಪತ್ರಕರ್ತರ ಮೇಲೂ ಹಲ್ಲೆ ನಡೆಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಹಾಗೂ 17 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ಶಾಸಕ ಋುಷಿಕೇಶ್ ಪಟೇಲ್ ಕಚೇರಿಯನ್ನು ಧ್ವಂಸಗೊಳಿಸಿದ್ದರಿಂದ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಮುಖಂಡ ಹಾರ್ದಿಕ್ ಹಾಗೂ ಇತರರ ವಿರುದ್ಧ ವಿಸ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ, ಪ್ರತಿವಾದ ಆಲಿಸಿದ ವಿಸ್ ನಗರ ಕೋರ್ಟ್, ಹಾರ್ದಿಕ್ ಪಟೇಲ್, ಲಾಲ್ ಜಿತ್ ಪಟೇಲ್ ಹಾಗೂ ಅಂಬಾಲಾಲ್ ಪಟೇಲ್ ದೋಷಿ ಎಂದು ಆದೇಶ ನೀಡಿ, 2 ವರ್ಷಗಳ ಜೈಲುಶಿಕ್ಷೆ ವಿಧಿಸಿ, ತಲಾ 50 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

Hardik Patel jailed for 2 years,violence during 2015 Patidar agitation

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ